ಜೂ.2ರಿಂದ ರಾಜ್ಯದಲ್ಲಿ ವ್ಯಾಪಕ ಮುಂಗಾರು ಮಳೆ ಸಾಧ್ಯತೆ

ಬೆಂಗಳೂರು, ಮೇ 31- ಪ್ರಸಕ್ತ ಸಾಲಿನ ನೈರುತ್ಯ ಮುಂಗಾರು ಜೂನ್‌ 2ರಂದು ರಾಜ್ಯಕ್ಕೆ ಆಗಮಿಸಲಿದ್ದು, ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಮುನ್ಸೂಚನೆಗಳಿವೆ.ಮುಂಗಾರು ನಿನ್ನೆ ಕೇರಳ ಪ್ರವೇಶ ಮಾಡಿರುವುದನ್ನು ಭಾರತೀಯ ಹವಾಮಾನ ಇಲಾಖೆ ದೃಢಪಡಿಸಿದೆ. ಎರಡು ದಿನ ಮುಂಚೆಯೇ ಕೇರಳ ಪ್ರವೇಶಿಸಿರುವುದಲ್ಲದೆ, ಈಶಾನ್ಯ ರಾಜ್ಯಗಳಲ್ಲೂ ಏಕಕಾಲಕ್ಕೆ ಮುಂಗಾರು ಆರಂಭಗೊಂಡಿದೆ. ಹೀಗಾಗಿ ಇನ್ನೆರಡು ದಿನಗಳಲ್ಲಿ ಮುಂಗಾರು ಮಳೆ ರಾಜ್ಯ ಪ್ರವೇಶ ಮಾಡಲಿದೆ. ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೊಂದು ಸುತ್ತು ಮಳೆ ಆರಂಭಗೊಳ್ಳಲಿದೆ. ಮುಂಗಾರು ದುರ್ಬಲವಾಗಿರುವುದರಿಂದ ಭಾರೀ ಮಳೆ … Continue reading ಜೂ.2ರಿಂದ ರಾಜ್ಯದಲ್ಲಿ ವ್ಯಾಪಕ ಮುಂಗಾರು ಮಳೆ ಸಾಧ್ಯತೆ