ರಾಜ್ಯದಲ್ಲಿ ಮತ್ತೆ ಪ್ರಬಲಗೊಂಡ ಮುಂಗಾರು, ರೆಡ್ ಅಲರ್ಟ್ ಘೋಷಣೆ

ಬೆಂಗಳೂರು, ಜೂ.21-ಮೇಲೈ ಸುಳಿಗಾಳಿ ಉಂಟಾಗಿರುವ ಪರಿಣಾಮ ನೈರುತ್ಯ ಮುಂಗಾರು ಪ್ರಬಲವಾಗಿದ್ದು, ನಿನ್ನೆಯಿಂದ ರಾಜ್ಯದ ಹಲವೆಡೆ ಮಳೆ ಹೆಚ್ಚಾಗಿದೆ. ವಾರಾಂತ್ಯಕ್ಕೆ ಮಳೆ ಪ್ರಮಾಣ ಹೆಚ್ಚಾಗಲಿದೆ. ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಹವಾಮಾನ ಮುನ್ಸೂಚನೆ ಪ್ರಕಾರ ಇನ್ನೂ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ. ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ ನೀಡಲಾಗಿದೆ. ಈಗಾಗಲೇ ಹಳದಿ ಮುನ್ನೆಚ್ಚರಿಕೆ ನೀಡಿದ್ದು, ನಾಳೆಯಿಂದ ಮೂರು ದಿನ ಕೆಂಪು ಎಚ್ಚರಿಕೆ ನೀಡಲಾಗಿದೆ. … Continue reading ರಾಜ್ಯದಲ್ಲಿ ಮತ್ತೆ ಪ್ರಬಲಗೊಂಡ ಮುಂಗಾರು, ರೆಡ್ ಅಲರ್ಟ್ ಘೋಷಣೆ