ಬೆಂಗಳೂರು, ಜೂ.30- ಆಟೋ ಚಾಲಕರು ನಿಗದಿ ಮಾಡಿದ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಆರ್‌ಟಿಓ ಅಧಿಕಾರಿಗಳು ತಪಾಸಣೆ ಕಾರ್ಯಾಚರಣೆ ಕೈಗೊಂಡಿದ್ದಾರೆ.
ಸದ್ಯಮಧ್ಯಾಹ್ನದವರೆಗೆ ನಿಯಮ ಉಲ್ಲಂಘಿಸಿದ 120ಕ್ಕೂ ಅಧಿಕ ಆಟೋಗಳನ್ನು ಸೀಜ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ನಿಗದಿ ಮಾಡಿರುವ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಆ್ಯಪ್ ಆಧಾರಿತ ಮತ್ತು ಇನ್ನಿತರ ಆಟೋ ಚಾಲಕರ ವಿರುದ್ಧ, ಕಾನೂನು ಉಲ್ಲಂಘಿಸುವವರ ವಿರುದ್ಧ ಮತ್ತು ಪ್ರಯಾಣಿಕರಿಂದ ಹೆಚ್ಚು ಹಣ ಪಡೆದರೆ ಅಂತವರ ಪರ್ಮೀಟ್ ರದ್ದು ಪಡಿಸುವಂತೆ ಸೂಚನೆ ನೀಡಲಾಗಿದೆ.
1ಈ ಕುರಿತಾಗಿ ಸಾರಿಗೆ ಇಲಾಖೆ ಜಂಟಿ ಆಯುಕ್ತೆ ಶೋಭಾ ಅವರು ಪ್ರತಿಕ್ರಿಯಿಸಿದ್ದು, ಸಾರ್ವಜನಿಕರಿಂದ ಆಟೋ ದರ ಹೆಚ್ಚಳ ವಸೂಲಿ ದೂರು ಬಂದಿತ್ತು. ಹೀಗಾಗಿ ಇಂದು ಆಟೋ ದರ ಪರಿಶೀಲನೆ ಮಾಡಲು ಮುಂದಾಗಿದ್ದೇವೆ. ಬೆಳಗ್ಗೆಯಿಂದ ಈವರೆಗೆ ನಗರದಲ್ಲಿ 100ಕ್ಕೂ ಅಧಿಕ ಆಟೋ ಸೀಜ್ ಮಾಡಲಾಗಿದೆ ಎಂದು ಹೇಳಿದರು.
ಪರಿಶೀಲನೆ ವೇಳೆ ಯಾವ ದಾಖಲೆಗಳೂ ಇಲ್ಲದೆ ಇರುವುದು ಗಮನಕ್ಕೆ ಬಂದಿದೆ. 250ಕ್ಕೂ ಅಧಿಕ ದೂರನ್ನು ಆಟೋ ಚಾಲಕರ ಮೇಲೆ ದಾಖಲೆ ಮಾಡಿಕೊಂಡಿದ್ದು, ಅಗ್ರಿಗೇಟರ್ ಕಂಪೆನಿಗಳ ಮೇಲೂ ನಾವು ನಿಗಾ ಇಡುತ್ತಿದ್ದೇವೆ ಎಂದಿದ್ದಾರೆ.
ಸರ್ಕಾರ ನೀಡಿರುವ ಆಟೋ ದರಕ್ಕೆ 5% ಸರ್ವೀಸ್ ಚಾರ್ಜ್ ಹಾಕಬಹುದು. ಅದು ಬಿಟ್ಟರೆ ದುಪ್ಪಟ್ಟು ದರ ವಿಧಿಸುವ ಅಧಿಕಾರ ಅಗ್ರಿಗೇಟರ್ ಕಂಪೆನಿಗಳಿಗಿಲ್ಲ. ಎಲ್ಲಾ ಕಡೆ ದಾಳಿ ನಡೆಯುತ್ತಿದೆ. ಇದನ್ನು ಹತೋಟಿಗೆ ತರುತ್ತೇವೆ ಎಂದು ತಿಳಿಸಿದ್ದಾರೆ.ಮೆಟ್ರೋ ಸೇರಿದಂತೆ ವಿವಿಧೆಡೆ ಕೇವಲ 2 ಕಿ.ಮೀಗೆ ಮೀಟರ್ ಹಾಕದೆ ಮೂರು ಪಟ್ಟು ಹೆಚ್ಚು ಹಣ ಕೇಳುತ್ತಾರೆ ಎಂದು ಪ್ರಯಣಿಕರೊಬ್ಬರು ದೂರಿದ್ದಾರೆ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (18-08-2025)
- ಪಾಕ್ ಪ್ರವಾಹದಲ್ಲಿ 220 ಜನ ಬಲಿ
- ಇಂಡೋನೇಷ್ಯಾದ ಸುಲಾವೆಸಿ ದ್ವೀಪದಲ್ಲಿ 5.8 ತೀವ್ರತೆಯ ಭೂಕಂಪ
- ಪೀಣ್ಯ ಫ್ಲೈ ಓವರ್ ಮೇಲೆ ಅಪಘಾತ, ಗ್ಯಾಸ್ ಸಿಲಿಂಡರ್ ಡೆಲಿವರಿ ಬಾಯ್ ಸಾವು
- ಧರ್ಮಸ್ಥಳದ ಅಪಪ್ರಚಾರ ಪಿತೂರಿ ಮಾಡಿದವರ ವಿರುದ್ಧ ತನಿಖೆಗೆ ಬಿವೈವಿ ಆಗ್ರಹ