ನಗರದಲ್ಲಿ ಒಂದೇ ದಿನ 30 ಸಾವಿರಕ್ಕೂ ಹೆಚ್ಚು ಮಂದಿಗೆ ಸೋಂಕುಬೆಂಗಳೂರು,ಜ.20-ನಗರದಲ್ಲಿ ದಿನೇ ದಿನೇ ಕೊರೊನಾ ಹೆಮ್ಮಾರಿ ಕಾಟ ಹೆಚ್ಚುತ್ತಲೆ ಹೋಗುತ್ತಿದೆ.ಕಳೆದ ಹಲವು ದಿನಗಳಿಂದ ಸೋಂಕು ಏರುಗತಿಯಲ್ಲಿ ಸಾಗುತ್ತಿದ್ದು, ಇಂದು ಒಂದೇ ದಿನ 30590 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ.
ನಿನ್ನೆ 23,409 ಸೋಂಕು ಪ್ರಕರಣಗಳು ಪತ್ತೆಯಾಗಿತ್ತು, ಇದೀಗ ಕೇವಲ 24 ಗಂಟೆಗಳಲ್ಲಿ 7 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುವ ಮೂಲಕ ಒಂದೇ ದಿನದಲ್ಲಿ 30590 ಮಂದಿ ಸೋಂಕಿಗೆ ಗುರಿಯಾಗಿದ್ದಾರೆ.
ನಗರದಲ್ಲಿ ದಿನೇ ದಿನೇ ಸೋಂಕು ತೀವ್ರಗೊಳ್ಳುತ್ತಿರುವುದನ್ನು ಮನಗಂಡು ಕೊರೊನಾ ನಿಯಮ ಪಾಲನೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಆಧ್ಯತೆ ನೀಡಲು ಬಿಬಿಎಂಪಿ ಅಕಾರಿಗಳು ಮನವಿ ಮಾಡಿಕೊಂಡಿದ್ದಾರೆ.
