Friday, November 22, 2024
Homeರಾಜ್ಯರಾಜ್ಯದಲ್ಲಿ 2ನೇ ಹಂತದ ಮತದಾನ : ಭದ್ರತೆಗಾಗಿ 40 ಸಾವಿರಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿ ನಿಯೋಜನೆ

ರಾಜ್ಯದಲ್ಲಿ 2ನೇ ಹಂತದ ಮತದಾನ : ಭದ್ರತೆಗಾಗಿ 40 ಸಾವಿರಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿ ನಿಯೋಜನೆ

ಬೆಂಗಳೂರು,ಮೇ6- ರಾಜ್ಯದಲ್ಲಿ ಎರಡನೇ ಹಂತದ ಮತದಾನ ಮುಕ್ತ ಹಾಗೂ ಶಾಂತಿಯುತವಾಗಿ ನಡೆಯಲು ಅಧಿಕಾರಿಗಳು ಸೇರಿದಂತೆ 40 ಸಾವಿರಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರಾದ ಹಿತೇಂದ್ರ ಅವರು ತಿಳಿಸಿದ್ದಾರೆ.

ಈ ಸಂಜೆಯೊಂದಿಗೆ ಮಾತನಾಡಿದ ಅವರು, ಸ್ಥಳೀಯ ಪೊಲೀಸರ ಜೊತೆಗೆ 70 ಕಂಪನಿ ಕೇಂದ್ರ ಪಡೆಗಳು, 150 ಫ್ಲಟೂನ್‌ ಕೆಎಸ್‌ಆರ್‌ಪಿ, ಡಿಎಆರ್‌ ಪ್ಲಟೂನ್‌ಗಳನ್ನು ನಿಯೋಜಿಸಲಾಗಿದೆ ಎಂದರು.

ಬೆಂಗಳೂರು, ಮೈಸೂರು ಸೇರಿದಂತೆ ಇತರೆ ಜಿಲ್ಲೆಗಳಿಂದಲೂ ಸಹ 2ನೇ ಹಂತದ ಮತದಾನಕ್ಕೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಮತದಾನ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್‌್ತ ಮಾಡಲಾಗಿದೆ ಎಂದರು.

ನಾಳೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಹಿರಿಯ ಅಧಿಕಾರಿಗಳು ಇಂದು ಗಸ್ತಿನಲ್ಲಿರುತ್ತಾರೆ ಎಂದು ಹಿತೇಂದ್ರ ಅವರು ತಿಳಿಸಿದರು.

RELATED ARTICLES

Latest News