ಚನ್ನರಾಯಪಟ್ಟಣ,ಮಾ.29: ಅಕ್ರಮವಾಗಿ ಗೋವುಗಳನ್ನು ಮಾರಣಹೋಮ ನಡೆಸಿದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಗೂರು ರಸ್ತೆ ಬಳಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಚನ್ನರಾಯಪಟ್ಟಣ ನಗರ ಪೊಲೀಸರು ಮಧ್ಯರಾತ್ರಿ ಸುಮಾರು 12.30ರ ವೇಳೆಗೆ ದಾಳಿ ನಡೆಸಿದ್ದು ಸುಮಾರು 60 ಕ್ಕೂ ಹೆಚ್ಚು ಗೋವುಗಳನ್ನು ಹತ್ಯೆ ಮಾಡಿರುವುದು ಪತ್ತೆಯಾಗಿದೆ.
ಜಾನುವಾರಗಳನ್ನು ಹತ್ಯೆ ಮಾಡಿ ರುಂಡಗಳನ್ನು ಬೇರ್ಪಡಿಸಿ, ಕೈಕಾಲುಗಳನ್ನು ಕತ್ತರಿಸಿ, ಚರ್ಮ ಸುಲಿದು ನೇತು ಹಾಕಿರುವುದನ್ನು ನೋಡಿ ಸ್ಥಳೀಯರೂ ಕೂಡ ಆತಂಕಗೊಂಡಿದ್ದಾರೆ. ಐದು ಗೋವುಗಳನ್ನು ಪೊಲೀಸರು ರಕ್ಷಣೆ ಮಾಡಿದ್ದು, ಸಾವಿರ ಕೆಜಿಗೂ ಅದಿಕ ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ ಗೋವುಗಳ ರಕ್ತ ಕೆರೆಗೆ ಹರಿದಿದೆ.ಪೊಲೀಸರು ದಾಳಿ ನಡೆಸುತ್ತಿದ್ದಂತೆ ಗೋಹಂತಕರು ಸ್ಥಳದಿಂದ ಪರಾರಿಯಾಗಿದ್ದಾರೆ.
ಇದೇ ವೇಳೆ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ 26 ಸಿಂದಿ ಕರುಗಳನ್ನು ಪೊಲೀಸರು ರಕ್ಷಿಸಿದ್ದಾರೆ.ವಾಹನ ತಪಾಸಣೆ ವೇಳೆ ಇದು ಪತ್ತೆಯಾಗಿದ್ದು,ಪೊಲೀಸರನ್ನು ಕಂಡ ಕೂಡಲೆ ವಾಹನ ಬಿಟ್ಟು ಚಾಲಕ ಹಾಗು ಮತ್ತೊಬ್ಬ ಅಲ್ಲಿಂದ ಪರಾರಿಯಾಗಿದ್ದಾರೆ.ಕರುಗಳನ್ನು ಪೊಲೀಸ್ ಠಾಣೆ ಬಳಿ ತಂದು ಆರೈಕೆ ಮಾಡಲಾಗುತ್ತಿದೆ.
ರಾಜ್ಯದ ಹಲವೆಡೆ ಜಾನುಮಾರುಗಳ ಅಕ್ರಮ ವಧೆ ಹಾಗೂ ಅಕ್ರಮ ಗೋಮಾಂಸ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದೆ ಎಂಬ ಮಾತುಗಳು ಕೇಳಿಬಂದಿದೆ. ಘಟನೆ ಬಗ್ಗೆ ಗಾಮಸ್ಥರು ಆಕೋಶ ವ್ಯಕ್ತಪಡಿಸಿದ್ದಾರೆ. ಚನ್ನರಾಯಪಟ್ಟಣ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.