Sunday, June 23, 2024
Homeರಾಷ್ಟ್ರೀಯಮೋರ್ಟರ್ ಶೆಲ್ ಸ್ಫೋಟಕ್ಕೆ ಇಬ್ಬರು ಬಲಿ

ಮೋರ್ಟರ್ ಶೆಲ್ ಸ್ಫೋಟಕ್ಕೆ ಇಬ್ಬರು ಬಲಿ

ಜಲ್ಪೈಗುರಿ, ಅ 6 (ಪಿಟಿಐ) ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ತೀಸ್ತಾ ನದಿಯ ಪ್ರವಾಹದಿಂದ ಮೋರ್ಟರ್ ಶೆಲ್ ಸ್ಪೋಟಗೊಂಡಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೋರ್ಟರ್ ಶೆಲ್ ಸೇನೆಗೆ ಸೇರಿದ್ದು, ಸಿಕ್ಕಿಂನಲ್ಲಿ ಮೇಘಸ್ಪೋಟ ಮತ್ತು ಹಠಾತ್ ಪ್ರವಾಹದ ನಂತರ ಬೆಟ್ಟಗಳಿಂದ ಹರಿಯುವ ಪ್ರವಾಹದಿಂದ ಒಯ್ಯಲಾಯಿತು ಎಂದು ಪೊಲೀಸರು ನಂಬಿದ್ದಾರೆ.

ಕಬಡ್ಡಿ ಫೈನಲ್‍ಗೆ ಲಗ್ಗೆ ಇಟ್ಟ ಭಾರತ ಮಹಿಳಾ ತಂಡ

ಸ್ಪೋಟದಲ್ಲಿ ಮೃತಪಟ್ಟ ಇಬ್ಬರ ಗುರುತುಗಳು ಇನ್ನಷ್ಟೇ ಪತ್ತೆಯಾಗಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡಿರುವ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಲಂಕುಷವಾಗಿ ತನಿಖೆ ಆರಂಭಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗಾಯಗೊಂಡಿರುವ ನಾಲ್ವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES

Latest News