ಕೇಂದ್ರ ಆರೋಗ್ಯ ರಾಜ್ಯ ಸಚಿವೆಗೆ ಕೊರೊನಾ

Social Share

ನವದೆಹಲಿ, ಜ.6- ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವೆ ಭಾರತಿ ಪ್ರವೀಣ್ ಸರ್ಕಾರ್ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಇಂದು ನನ್ನ ಕೋವಿಡ್-19ರ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ನಾನು ಮನೆಯಲ್ಲೇ ಕ್ವಾರಂಟೈನ್‍ನಲ್ಲಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಸ್ವತಃ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಕೊರೊನಾ ವೈರಸ್ ಸೋಂಕು ತಡೆಗಟ್ಟುವ ನಿಯಮ ಪಾಲಿಸಬೇಕು ಎಂದು ಭಾರತಿ ಹಿಂದಿಯಲ್ಲಿ ಟ್ವಿಟ್ ಮಾಡಿದ್ದಾರೆ.
ಈಗಾಗಲೇ ಇವರೊಂದಿಗೆ ಸಂಪರ್ಕದಲ್ಲಿದ್ದ ಅಕಾರಿಗಳು ಹಾಗೂ ಆಪ್ತ ಸಹಾಯಕರಿಗೆ ಕೂಡಲೇ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

Articles You Might Like

Share This Article