ಮಾಸ್ಕೋದಿಂದ ಗೋವಾಕ್ಕೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ

Social Share

ಪಣಜಿ,ಜ.21- ರಷ್ಯಾದ ರಾಜಧಾನಿ ಮಾಸ್ಕೋದಿಂದ ಗೋವಾಕ್ಕೆ ಹೊರಟಿದ್ದ ಚಾರ್ಟರ್ಡ್ ವಿಮಾನ ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಮಾರ್ಗ ಬದಲಾವಣೆ ಮಾಡಿ ಉಜ್ಬೇಕಿಸ್ತಾನದತ್ತ ಪ್ರಯಾಣಿಸಿದೆ.

ದಕ್ಷಿಣ ಗೋವಾದ ದಬೋಲಿಮ್ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 4.15ಕ್ಕೆ ವಿಮಾನ ಲ್ಯಾಂಡ್ ಆಗಬೇಕಿತ್ತು. ಅಜುರ್ ಏರ್ ಸಂಸ್ಥೆಯ ಈ ವಿಮಾನ ಭಾರತೀಯ ವಾಯುಪ್ರದೇಶವನ್ನು ಪ್ರವೇಶಿಸುವ ಮೊದಲು ಮಾರ್ಗ ಬದಲಾವಣೆ ಮಾಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಬಂದಿರುವ ಕುರಿತು, ಡಾಬೋಲಿಮ್ ವಿಮಾನ ನಿಲ್ದಾಣದ ನಿರ್ದೇಶಕರಿಂದ 12.30 ಕ್ಕೆ ಇಮೇಲ್ ಮೂಲಕ ಮಾಹಿತಿ ದೊರೆತಿತ್ತು. ಈ ಹಿನ್ನೆಲೆಯಲ್ಲಿ 240 ಪ್ರಯಾಣಿಕರಿದ್ದ ವಿಮಾನವನ್ನು ಬೇರೆಡೆಗೆ ತಿರುಗಿಸಲಾಗಿದೆ ಎಂದು ಅಧಿಕಾರಿ ಹೇಳಿದರು.

ಕೃಷಿ ಸಮಸ್ಯೆಗಳಿಗೆ ನೂತನ ಸಂಶೋಧನೆ ಆಗಲಿ : CM ಬೊಮ್ಮಾಯಿ

ಇದಕ್ಕೂ ಮೊದಲು ಇದೇ ರೀತಿಯ ಘಟನೆ ವರದಿಯಾಗಿತ್ತು. ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಕಳೆದ ಎರಡು ವಾರಗಳ ಹಿಂದೆ ಮಾಸ್ಕೋದಿಂದ ಆಗಮಿಸಿದ್ದ ವಿಮಾನವನ್ನು ಗೋವಾ ಬದಲು ಗುಜರಾತ್ನ್ ಜಾಮ್ನನಗರದ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿಸಲಾಗಿತ್ತು.

Moscow, Goa, flight, diverted, Uzbekistan, bomb threat,

Articles You Might Like

Share This Article