ಬೆಂಗಳೂರು,ಫೆ.17-ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತವರು ಕ್ಷೇತ್ರಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ. ಹಾವೇರಿ ಜಿಲ್ಲೆ ಸವಣೂರಿನಲ್ಲಿ ನೂತನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದು ಘೋಷಿಸಿದರು.
ಮನೆ ಮನೆಗೆ ಆರೋಗ್ಯ ಯೋಜನೆಯಡಿ ಪ್ರತಿ ಹಳ್ಳಿಯಲ್ಲಿ ವರ್ಷದಲ್ಲಿ ಎರಡು ಬಾರಿ ಆರೋಗ್ಯ ಶಿಬಿರವನ್ನು ಸ್ಥಳೀಯ ಕೇಂದ್ರಗಳ ಮೂಲಕ ಆಯೋಜನೆ ಮಾಡಲಾಗುವುದು. ತೀವ್ರವಾದ ಖಾಯಿಲೆಗಳನ್ನು ಆರಂಭದಲ್ಲಿಯೇ ಪತ್ತೆ ಮಾಡಿ ಚಿಕಿತ್ಸೆ ಕೊಡಲು ಯೋಜನೆ ರೂಪಿಸಲಾಗುವದು. ಜೊತೆಗೆ ದೀರ್ಘಕಾಲದ ಖಾಯಿಲೆಗಳಿಂದ ಬಳಲುತ್ತಿರುವವರ ಮನೆ ಬಾಗಿಲಿಗೆ ಔಷ ತಲುಪಿಸಲು ಯೋಜನೆಯಡಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದರು.
ಹಾವೇರಿ ಜಿಲ್ಲೆ ಶಿಗ್ಗಾಂವ್ ತಾಲೂಕಿನ ಬಂಕಾಪುರದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಸರ್ಕಾರಿ ಇಂಜಿನಿಯರಿಂಗ್ ಕಾಲೇಜನ್ನಾಗಿ ಉನ್ನತೀಕರಣ ಮಾಡಲಾಗುತ್ತದೆ ಎಂದು ಹೇಳಿದರು.ಶಿಕ್ಷಣ ಹಾಗೂ ಆರೋಗ್ಯ ಸೇವೆಗಳು ಎಲ್ಲ ವರ್ಗಗಳ, ಎಲ್ಲ ಪ್ರದೇಶಗಳ ಜನರಿಗೆ ಸುಲಭವಾಗಿ ದೊರೆಯುವಂತೆ ಮಾಡುವುದು ನಮ್ಮ ಆದ್ಯತೆಯಾಗಿದೆ ಎಂದರು.
ಪಂಗಡಗಳು, ಅಂತೆಯೇ ಪರಿಶಿಷ್ಟ ಜಾತಿ, ಪರಿಶಿಷ್ಟ ಹಿಂದುಳಿದ ವರ್ಗಗಳು ಅಲ್ಪಸಂಖ್ಯಾತ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ಜಾರಿಯಲ್ಲಿರುವ ಯೋಜನೆಗಳನ್ನು ಸರಳ, ಸುಗಮಗೊಳಿಸುವ ಜೊತೆಗೆ ನೂತನ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ.
ರಾಜ್ಯದ 10.32 ಲಕ್ಷ ಮಕ್ಕಳಿಗೆ ರೈತ ವಿದ್ಯಾನಿ ಯೋಜನೆಯಡಿ 725 ಕೋಟಿ ರೂಪಾಯಿ ಮೊತ್ತವನ್ನು ಬಜೆಟ್ನಲ್ಲಿ ನೀಡಲಾಗಿದೆ. 2022-23ನೇ ಸಾಲಿನಲ್ಲಿ ಈ ಸೌಲಭ್ಯವನ್ನು ಭೂರಹಿತ ಕೃಷಿ ಕೂಲಿ ಕಾರ್ಮಿಕರು, ನೇಕಾರರು, ಮೀನುಗಾರರು, ಯಲ್ಲೋ ಬೋರ್ಡ್ ಚಾಲಕರು ಹಾಗೂ ಆಟೋರಿಕ್ಷಾ ಚಾಲಕರ ಮಕ್ಕಳಿಗೆ ವಿಸ್ತರಿಸಲಾಗಿದೆ.
ಹೆಚ್ಚುವರಿಯಾಗಿ 3 ಲಕ್ಷ ವಿದ್ಯಾರ್ಥಿಗಳಿಗೆ 141 ಕೋಟಿ ರೂಪಾಯಿ ಮೊತ್ತವನ್ನು ನೀಡಲಾಗಿದೆ. ಪ್ರಸಕ್ತ ಈ ವರ್ಷದಲ್ಲಿ ಯೋಜನೆಯನ್ನು ರಾಜ್ಯದ ಸಿಂಪಿಗರ ಮಕ್ಕಳಿಗೂ ವಿಸ್ತರಣೆ ಮಾಡಲಾಗಿದೆ ಎಂದು ಸಿಎಂ ಬೊಮ್ಮಾಯಿ ಘೋಷಣೆ ಮಾಡಿದರು.
#MotherChildHospital, #Savanur, #HaveriDistrict, #BasavarajBommai #Budget2023, #StateBudget2023, #BommaiBudget, #ಬಜೆಟ್ #ಬಜೆಟ್2023,