Sunday, September 8, 2024
Homeರಾಜ್ಯಕೇಂದ್ರದ ಲೋಕಸಭೆ-ವಿಧಾನಸಭೆ ಕ್ಷೇತ್ರಗಳ ಪುನರ್‌ ವಿಂಗಡಣೆ ಪ್ರಸ್ತಾವನೆ ವಿರೋಧಿ ನಿರ್ಣಯ ಮಂಡನೆ

ಕೇಂದ್ರದ ಲೋಕಸಭೆ-ವಿಧಾನಸಭೆ ಕ್ಷೇತ್ರಗಳ ಪುನರ್‌ ವಿಂಗಡಣೆ ಪ್ರಸ್ತಾವನೆ ವಿರೋಧಿ ನಿರ್ಣಯ ಮಂಡನೆ

ಬೆಂಗಳೂರು,ಜು.25- ಹೊಸ ಜನಗಣತಿಯ ಆಧಾರದ ಮೇಲೆ ಲೋಕಸಭೆ ಮತ್ತು ವಿಧಾನಸಭೆ ಕ್ಷೇತ್ರಗಳ ಪುನರ್‌ ವಿಂಗಡಣೆ ಮಾಡುವ ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ವಿರೋಧಿಸುವ ನಿರ್ಣಯವನ್ನು ರಾಜ್ಯ ಸರ್ಕಾರ ಮಂಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧ ಪಕ್ಷಗಳ ಸದಸ್ಯರ ಗದ್ದಲದ ನಡುವೆಯೇ ಹೊಸ ಜನಗಣತಿ ಆಧಾರದ ಮೇಲೆ ಕ್ಷೇತ್ರ ಪುನರ್‌ ವಿಂಗಡನೆ ಪ್ರಕ್ರಿಯೆಯನ್ನು ನಡೆಸಬಾರದೆಂಬ ನಿರ್ಣಯವನ್ನು ಮಂಡಿಸಿದರು.

ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌‍ ಸದಸ್ಯರ ನಡುವೆಯೇ ಸಭಾಪತಿ ಬಸವರಾಜ ಹೊರಟ್ಟಿಯವರು ನಿರ್ಣಯವನ್ನು ಅಂಗೀಕರಿಸಲಾಗಿದೆ ಎಂದು ಘೋಷಿಸಿದರು. ಕರ್ನಾಟಕ ವಿಧಾನ ಸಭೆಯು, 2026ರಲ್ಲಿನ ಅಥವಾ ಅದರ ನಂತರ ನಡೆಸುವ ಹೊಸ ಜನಗಣತಿಯ ಆಧಾರದ ಮೇಲೆ ಕ್ಷೇತ್ರ ಪುನರ್‌ವಿಂಗಡಣಾ ಪ್ರಕ್ರಿಯೆಯನ್ನು ನಡೆಸಬಾರದೆಂದು ಜನಸಂಖ್ಯೆಯನ್ನು ಆಧರಿಸಿ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸುವ ಸಂದರ್ಭದಲ್ಲಿ, ಪ್ರತೀ ರಾಜ್ಯಕ್ಕೆ ಹಂಚಿಕೆ ಮಾಡಬೇಕಾದ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಮತ್ತು ಪ್ರತಿ ರಾಜ್ಯದ ವಿಧಾನ ಸಭೆಗೆ ನಿಗದಿಪಡಿಸಬೇಕಾದ ಸ್ಥಾನಗಳ ಒಟ್ಟು ಸಂಖ್ಯೆಯನ್ನು 1971ರ ಜನಗಣತಿಯನ್ನಾಧರಿಸಿ ನಿರ್ಧರಿಸಬೇಕೆಂದು ಕೇಂದ್ರ ಸರ್ಕಾರವನ್ನು ಈ ಸದನವು ಒತ್ತಾಯಿಸುತ್ತದೆ ಎಂದು ಹೇಳಿದರು.

ಭಾರತವು ವಿಶ್ವದ ಅತಿದೊಡ್ಡ ಒಕ್ಕೂಟ ಪ್ರಜಾಪುಭುತ್ವವಾಗಿದೆ. ಭಾರತ ಸಂವಿಧಾನದ ಭಾಗ XVಯಲ್ಲಿ ಪ್ರತಿಪಾದಿಸಿರುವ ಮುಕ್ತ ಮತ್ತು ನ್ಯಾಯಸಮತ ಚುನಾವಣೆಯ ತತ್ವವು ಈ ಪ್ರಜಾಪ್ರಭುತ್ವದ ಆತವಾಗಿದೆ. ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವವು ಭಾರತದ ಪ್ರಜಾಸತ್ತಾತಕ ಮತ್ತು ಒಕ್ಕೂಟ ವ್ಯವಸ್ಥೆಗೆ ಅಪಾಯವನ್ನುಂಟು ಮಾಡುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಬೇರೆ ಬೇರೆ ರಾಜ್ಯಗಳ ವಿಧಾನ ಸಭೆಗಳು ಅವುಗಳದ್ದೇ ಅಧಿಕಾರ ಅವಧಿಗಳನ್ನು ಹೊಂದಿರುತ್ತವೆ, ಮತ್ತು ಏಕರೂಪ ಚುನಾವಣಾ ವೇಳಾಪಟ್ಟಿಯು ರಾಷ್ಟ್ರೀಯ ವಿಷಯಗಳ ಮೇಲೆ ಹೆಚ್ಚಾಗಿ ಗಮನಹರಿಸುವ ಮತ್ತು ಸ್ಥಳೀಯ ಕಾಳಜಿಗಳನ್ನು ನಿರ್ಲಕ್ಷಿಸುವ ಮೂಲಕ ರಾಜ್ಯಗಳ ಸ್ವಾಯತ್ತತೆಯನ್ನು ದುರ್ಬಲಗೊಳಿಸಬಹುದು ಎಂದು ಆರೋಪಿಸಿದರು.

ಸಾಕಷ್ಟು ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದು, ಚುನಾವಣಾ ಸಿಬ್ಬಂದಿಯನ್ನು ನಿರ್ವಹಿಸುವುದು. ಮತದಾರರ ಬೇಸರ, ಕಡಿಮೆಗೊಂಡ ಸರ್ಕಾರದ ಉತ್ತರದಾಯಿತ್ವ ಹಾಗೂ ಆರ್ಥಿಕ ಮತ್ತು ಸಾಮಾಜಿಕ ಅಡತಡೆಗಳು ಏಕಕಾಲಿಕ ಚುನಾವಣೆಗಳಿಗೆ ಸಂಬಂಧಿಸಿದ ಗುರುತರ ಗಂಡಾಂತರಗಳಾಗಿವೆ. ಹಾಗಾಗಿ ಭಾರತದ ಪ್ರಜಾಸತ್ತಾತಕ ಪ್ರಕ್ರಿಯೆಗಳು ಮತ್ತು ಒಕ್ಕೂಟ ಸಮಗ್ರತೆಯನ್ನು ರಕ್ಷಿಸಲು ಕಠೋರ ನೀತಿಯನ್ನು ಅನುಷ್ಠಾನಗೊಳಿಸಬಾರದೆಂದು ಕೇಂದ್ರ ಸರ್ಕಾರವನ್ನು ಈ ಸದನವು ಒತ್ತಾಯಿಸುತ್ತದೆ ಎಂದು ರಾಜ್ಯ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು.

ಮಾಜಿ ರಾಷ್ಟ್ರಪತಿ ರಾಮ್‌ ನಾಥ್‌ ಕೋವಿಂದ್‌ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಏಕಕಾಲದ ಚುನಾವಣೆಯ ಉನ್ನತ ಮಟ್ಟದ ಸಮಿತಿಯು ಒಂದು ರಾಷ್ಟ್ರ, ಒಂದು ಚುನಾವಣೆೞ ಕುರಿತು ತನ್ನ ವರದಿಯನ್ನು ಮಾರ್ಚ್‌ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿತ್ತು. 2024 ರ ಲೋಕಸಭಾ ಚುನಾವಣೆಯ ನಂತರ ಜನಗಣತಿ ಮತ್ತು ಡಿಲಿಮಿಟೇಶನ್‌ ಪ್ರಕ್ರಿಯೆಗಳು ಶೀಘ್ರದಲ್ಲೇ ಪ್ರಾರಂಭವಾಗಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಈ ಹಿಂದೆ ಹೇಳಿದ್ದರು.

RELATED ARTICLES

Latest News