Sunday, September 29, 2024
Homeರಾಜ್ಯಕೇಂದ್ರ ಹಣಕಾಸು ಸಂಸದೀಯ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಡಾ.ಕೆ.ಸುಧಾಕರ್‌ ನೇಮಕ

ಕೇಂದ್ರ ಹಣಕಾಸು ಸಂಸದೀಯ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಡಾ.ಕೆ.ಸುಧಾಕರ್‌ ನೇಮಕ

MP Dr. K. Sudhakar has been appointed as a member of the Parliamentary Standing Committee

ಚಿಕ್ಕಬಳಾಪುರ, ಸೆ 28- ಕೇಂದ್ರ ಸರ್ಕಾರದಿಂದ ಸಂಸದೀಯ ಸ್ಥಾಯಿ ಸಮಿತಿಗಳಿಗೆ ನೇಮಕಾತಿ ನಡೆದಿದ್ದು, ಈ ಪೈಕಿ ಸಂಸದ ಡಾ.ಕೆ.ಸುಧಾಕರ್‌ ಅವರನ್ನು ಹಣಕಾಸು ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಡಾ.ಕೆ.ಸುಧಾಕರ್‌ ಅವರು ಮೊದಲ ಬಾರಿಗೆ ಸಂಸದರಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಅವಧಿಯಲ್ಲೇ ಅವರನ್ನು ಸ್ಥಾಯಿ ಸಮಿತಿಗೆ ನೇಮಿಸಿ ಮಹತ್ವದ ಹೊಣೆ ವಹಿಸಲಾಗಿದೆ. ಈ ಕುರಿತು ಸಂಸದ ಡಾ.ಕೆ.ಸುಧಾಕರ್‌ ಸಂತಸ ವ್ಯಕ್ತಪಡಿಸಿದ್ದಾರೆ.

ಸಂಸತ್ತಿನ ಹಣಕಾಸು ಸ್ಥಾಯಿ ಸಮಿತಿಯ ಸದಸ್ಯನಾಗಿ ಆಯ್ಕೆಯಾಗಿರುವುದು ಅತ್ಯಂತ ಹೆಮೆ ಮತ್ತು ಸಂತಸದ ವಿಷಯ. ಈ ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ, ಲೋಕಸಭಾಧ್ಯಕ್ಷರಾದ ಓಂ ಬಿರ್ಲಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪಕ್ಷದ ಹಿರಿಯ ನಾಯಕರಾದ ಅಮಿತ್‌ ಶಾ ಹಾಗೂ ಬಿ.ಎಲ್‌.ಸಂತೋಷ್‌ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಅವರು ಹೇಳಿದ್ದಾರೆ.

2025ರ ವೇಳೆಗೆ ಭಾರತವನ್ನು 5 ಟ್ರಿಲಿಯನ್‌ ಡಾಲರ್‌ ಆರ್ಥಿಕತೆಯನ್ನಾಗಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಕಾಂಕ್ಷೆಯ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ, ಸಂಸತ್ತಿನ ಹಣಕಾಸು ಸ್ಥಾಯಿ ಸಮಿತಿಯ ಸದಸ್ಯನಾಗಿ ನನ್ನದೇ ಆದ ಅಳಿಲು ಸೇವೆ ಸಲ್ಲಿಸಲು ಉತ್ಸುಕನಾಗಿದ್ದೇನೆೞೞ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

RELATED ARTICLES

Latest News