ಸಮಾಜಘಾತುಕರನ್ನು ಎನ್‍ಕೌಂಟರ್ ಮಾಡುವುದೇ ಸರಿಯಾದ ಕ್ರಮ: ರೇಣುಕಾಚಾರ್ಯ

Social Share

ಬೆಂಗಳೂರು,ಫೆ.22- ಸಮಾಜದಲ್ಲಿ ಆತಂಕ ಸೃಷ್ಟಿಸಿ ಕೋಮುಸೌಹಾರ್ದತೆಗೆ ಧಕ್ಕೆ ತರುವ ಸಮಾಜಘಾತುಕ ಶಕ್ತಿಗಳನ್ನು ಎನ್‍ಕೌಂಟರ್ ಮಾಡುವುದೇ ಸರಿಯಾದ ಕ್ರಮ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪದೇ ಪದೇ ಹಿಂದೂ ಯುವಕರನ್ನು ಗುರಿಯಾಗಿಟ್ಟುಕೊಂಡು ಕೆಲವು ಸಮಾಜಘಾತುಕ ಶಕ್ತಿಗಳನ್ನು ಎನ್‍ಕೌಂಟರ್ ಮಾಡುವುದು ಸರಿಯಾದ ಕ್ರಮ ಎಂದು ಹೇಳಿದರು.
ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಇತ್ತೀಚೆಗೆ ರಾಜ್ಯದಲ್ಲಿ ಕೆಲವು ಮತೀಯ ಶಕ್ತಿಗಳು ಹಿಂದೂ ಯುವಕರನ್ನು ಗುರಿಯಾಗಿಟ್ಟುಕೊಂಡುಕಗ್ಗೊಲೆ ಮಾಡುವಂತಹ ಹೀನ ಕೃತ್ಯ ನಡೆಸುತ್ತಿದ್ದಾರೆ. ಇದರಲ್ಲಿ ಕೆಲವು ಅಂತಾರಾಷ್ಟ್ರೀಯ ಭಯೋತ್ಪಾದನೆ ಸಂಘಟನೆಗಳ ಕೈವಾಡವಿದೆ. ಯಾರೇ ಆಗಿದ್ದರೂ ಸಹ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಮೃತ ಹರ್ಷನ ದೇಹದಲ್ಲಿ ನಮ್ಮದೇ ಹಿಂದೂ ರಕ್ತ ಹರಿಯುತ್ತಿತ್ತು. ಎಲ್ಲ ಮುಸ್ಲಿಮರು ಭಯೋತ್ಪಾದಕರಲ್ಲ. ಘಟನೆಗೆ ಸಂಬಂಧಿಸಿದಂತೆ ನಾನು ಮುಸ್ಲಿಮರ ಬಗ್ಗೆ ಮಾತನಾಡುವುದಿಲ್ಲ. ನಾವು ಮೃಧುಧೋರಣೆ ತಳೆದಿದ್ದೇವೆ. ನಮ್ಮ ತಾಳ್ಮೆಯನ್ನು ಪರೀಕ್ಷಿಸಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಿವಮೊಗ್ಗದಲ್ಲಿ ಭಜರಂಗದಳದ ಹಿಂದೂ ಕಾರ್ಯಕರ್ತನ ಬರ್ಭರ ಹತ್ಯೆಯ ಹಿಂದೆ ಕೆಲವು ಸಂಘಟನೆಗಳ ಕೈವಾಡ ಇದೆ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತದೆ. ಇನ್ಮುಂದೆ ಇಂತಹ ಘಟನೆ ಮರುಕಳಿಸಬಾರದು.  ರಾಜ್ಯದಲ್ಲಿ ಮತ್ತು ದೇಶದಲ್ಲಿ ನಮ್ಮದೇ ಸರ್ಕಾರವಿದೆ. ತಕ್ಷಣವೇ ಈ ಪ್ರಕರಣದ ತನಿಖೆಯನ್ನು ಎನ್‍ಐಎಗೆ ವಹಿಸಬೇಕು ಎಂದು ಅವರು ಒತ್ತಾಯಿಸಿದರು.
ಇದರ ಹಿಂದೆ ಕಾಂಗ್ರೆಸ್ ಕೈವಾಡವೂ ಇದೆ ಎಂದು ಆರೋಪಿಸಿದ ಅವರು, ಸಚಿವ ಈಶ್ವರಪ್ಪನವರ ವಜಾಕ್ಕೆ ಆಗ್ರಹಿಸಿ ಕಾಂಗ್ರೆಸ್‍ನವರು ಕಲಾಪ ನಡೆಸಲು ಬಿಡದೆ ಅಡ್ಡಿಪಡಿಸುತ್ತಿದ್ದಾರೆ. ಯಾವ ಪುರುಷಾರ್ಥಕ್ಕೆ ನೀವು ಧರಣಿ ಮಾಡುತ್ತೀದ್ದೀರಿ? ಎಂದು ಪ್ರಶ್ನಿಸಿದ್ದಾರೆ.
ಸರ್ಕಾರದ ವೈಫಲ್ಯದಿಂದ ಇಂತಹ ಘಟನೆಯಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ರೇಣುಕಾಚಾರ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಅವರ ಪ್ರಚೋದನಕಾರಿ ಹೇಳಿಕೆಗಳು ಘಟನೆಗೆ ಕಾರಣವಾಗಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಇಂತಹ ಸಂದಿಗ್ಧ ಪರಿಸ್ಥಿತಿ ಉಂಟಾಗಿದೆ. ಇಂಥ ಸಂದರ್ಭದಲ್ಲಿ ಅವರುಗಳು ಸರ್ಕಾರದ ಜೊತೆ ನಿಲ್ಲಬೇಕಿತ್ತು. ಬದಲಾಗಿ ಇಂತಹ ಕೃತ್ಯಗಳಿಗೆ ಎಡೆ ಮಾಡಿಕೊಟ್ಟಿದ್ದಾರೆ. ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಹೇಳೀದರು. ಈಶ್ವರಪ್ಪ ಒಬ್ಬ ಅಪ್ಪಟ ದೇಶಭಕ್ತ. ದೇಶದ್ರೋಹಿಗಳಿಂದ ಈ ಬರ್ಬರ ಹತ್ಯೆ ಆಗಿದೆ. ಪೂರ್ವ ತನಿಖೆ ಆದ ಮೇಲೆ ಎಲ್ಲಾವೂ ಹೊರಬರುತ್ತದೆ. ಮತ್ತೆ ಇಂತಹ ಘಟನೆಗಳು ಮರುಗಳಿಸಿದರೆ ನಾವು ಬೀದಿಗಿಳಿದು ಪ್ರತಿಭಟನೆ ಮಾಡುತ್ತೇವೆ ಎಂದ ಹೇಳಿದರು.
ಗುರುವಾರ ನಾನು ಕೂಡ ಸ್ಥಳಕ್ಕೆ ಭೇಟಿ ಕೊಡುತ್ತೇನೆ. ನನಗೆ ಶಾಸಕ ಸ್ಥಾನ ಮುಖ್ಯ ಅಲ್ಲ ಹಿಂದೂತ್ವ ಮುಖ್ಯ. ಹಿಂದು ಯುವಕರ ಮೇಲೆ ಸಂಚು ನಡೆಯುತ್ತಿದೆ. ಭಾರತ ಮಾತೆ ಪೋಟೋ ಹಾಕಿದವರೇ ಮೇಲೆ ಈ ರೀತಿ ನಡೆಯುತ್ತದೆ. ತಾಕತ್ತಿದ್ದರೆ ಅಟ್ಯಾಕ್ ಮಾಡಿ ನಾವ್ ನೋಡ್ಕೋತ್ತೀವಿ ಎಂದು ಸವಾಲು ಹಾಕಿದರು.

Articles You Might Like

Share This Article