ಬೆಂಗಳೂರು, ಫೆ.20- ರಾಜ್ಯ ರಾಜಕಾರಣದಲ್ಲಿ ಭಾರೀ ಬಿರುಗಾಳಿಯನ್ನೇ ಎಬ್ಬಿಸಿದ್ದ ಮೈಸೂರು ನಗಾರಭಿವೃದ್ದಿ ಪ್ರಾಧಿಕಾರ (ಮೂಡಾ)ದಲ್ಲಿ ಆಕ್ರಮ ನಿವೇಶನ ಪಡೆದ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅವರ ಕುಟುಂಬಸ್ಥರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ.
ಪ್ರಕರಣದ ತನಿಖೆ ನಡೆಸಿದ್ದ ಮೈಸೂರು ಲೋಕಾಯುಕ್ತ ಎಸ್.ಪಿ ಉದೇಶ್ ಅವರು, ಇಂದು ಮುಚ್ಚಿದ ಲಕೋಟೆಯಲ್ಲಿ ಸುಮಾರು 11,200 ಪುಟಗಳ ವರಿದಿಯನ್ನು ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರಿದ್ದ ಪೀಠಕ್ಕೆ ಸಲ್ಲಿಸಿದ್ದಾರೆ.
ನ್ಯಾಯಾಲುಯವು ಮುಂದಿನ ವಿಚಾರಣೆಯನ್ನು ಸೋಮವಾರ (ಫೆ.24)ಕ್ಕೆ ಮುಂದೂಡಿದೆ. 50 ಜನರ ಹೇಳಿಕೆಗಳನ್ನು ದಾಖಲು ಮಾಡಿದ ಪೊಲೀಸರು 27 ಸಂಪುಟ, 11,200 ಪುಟಗಳ ತನಿಖಾ ವರದಿಯನ್ನು ಬಿ ರಿಪೋರ್ಟ್ ಎಂದೇ ಉಲ್ಲೇಖಿಸಿದ್ದಾರೆ.
ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರವಿಲ್ಲ ಎಂಬುದು ತನಿಖೆಯಲ್ಲಿ ಕಂಡುಬಂದಿದೆ. ಅಲ್ಲದೆ, ಆರೋಪಕ್ಕೆ ಪೂರಕವಾಗಿ ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ಬಿ-ರಿಪೋರ್ಟ್‌ಲ್ಲಿಕೆ ಮಾಡಿದ್ದಾರೆ.
ಈ ಕುರಿತು ದೂರುದಾರ ಸ್ನೇಹಮಯಿ ಕೃಷ್ಣಾ ಅವರಿಗೆ ನೋಟಿಸ್ ಜಾರಿಗೊಳಿಸಿರುವ ಲೋಕಾಯುಕ್ತ, ಅದರಲ್ಲಿ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಅವರ ಸಹೋದರ ಮಲ್ಲಿಕಾರ್ಜನಯ್ಯ ಸ್ವಾಮಿ ಹಾಗೂ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಅವರ ಬಗೆಗಿನ ಆರೋಪಗಳನ್ನು ಸಾಬೀತುಪಡಿಸುವ ಯಾವುದೇ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಎಂದಿದೆ.