ಬೆಂಗಳೂರು,ಅ.1- ಮುಡಾ ಪ್ರಕರಣದಲ್ಲಿ ಮತ್ತಷ್ಟು ಆಳಕ್ಕಿಳಿದಿರುವ ಜಾರಿ ನಿರ್ದೇಶನಾಲಯ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸಿದ್ದ 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಿಸಿಕೊಂಡಿದೆ. ವಿಶೇಷ ಎಂದರೆ ಸೋಮವಾರವಷ್ಟೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದು ಮಲ್ಲಿಕಾರ್ಜುನ, ಭೂ ಮಾಲೀಕ ದೇವರಾಜ್ ಸೇರಿದಂತೆ ಒಟ್ಟು ನಾಲ್ವರ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಇಎಂಎಲ್ಎ)ಯಡಿ ದೂರು ದಾಖಲಿಸಿತ್ತು.
ಇದೀಗ ಇ.ಡಿ ಅ„ಕಾರಿಗಳು ಮುಡಾದಲ್ಲಿ ಕಾರ್ಯ ನಿರ್ವಹಿಸಿದ್ದ 18 ಅ„ಕಾರಿಗಳ ವಿರುದ್ಧ ಇಂಫೋರ್ಸ್ನಮೆಂಟ್ ಕೇಸ್ ಇನ್ಫರ್ಮೇಷನ್ ರಿಪೊರ್ಟ್ ದೂರು ದಾಖಲಿಸಿಕೊಂಡಿದೆ ಎಂದು ತಿಳಿದುಬಂದಿದೆ.
ಹಿನಕಲ್ ಸರ್ವೇ ನಂಬರ್ 89ರಲ್ಲಿ ಮುಡಾದಿಂದ ನಿವೇಶನ ಹಂಚಿಕೆಯಾಗಿತ್ತು. 350ಕ್ಕೂ ಹೆಚ್ಚು ಪ್ರಭಾವಿಗಳಿಗೆ 7.18 ಎಕರೆ ಜಮೀನನ್ನು ಹಂಚಿಕೆ ಮಾಡಿದ ಆರೋಪವಿದೆ. ಇದಕ್ಕೆ ಸಂಬಂ„ಸಿದಂತೆ 2017ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಾಗಿದೆ.
ಈಗಾಗಲೇ ಪ್ರಕರಣಕ್ಕೆ ಸಂಬಂ„ಸಿದಂತೆ ಸೆ.9ರಂದು ಈ ಎಲ್ಲಾ 18 ಅ„ಕಾರಿಗಳಿಗೆ ಲೋಕಾಯುಕ್ತ ಪೊಲೀಸರ ವಿಚಾರಣೆಗೆ ಬರುವಂತೆ ನೋಟಿಸ್ ಜಾರಿ ಮಾಡಿತ್ತು.14 ಬದಲಿ ನಿವೇಶನಗಳ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂ„ಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸೆ.30 ರಂದು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿತ್ತು.
ಇಡಿ ತನಿಖೆ ಮಾಡಬೇಕಿದ್ದರೆ ಮೊದಲಿಗೆ ಯಾವುದಾದರೂ ಒಂದು ತನಿಖಾ ಸಂಸ್ಥೆಯಲ್ಲಿ ಪ್ರಕರಣ ದಾಖಲಾಗಿರಬೇಕು. ಈಗ ಮೈಸೂರಿನ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರ ಆಧಾರದಲ್ಲಿ ಇಡಿ ತನಿಖೆ ನಡೆಸಬಹುದಾಗಿದೆ. ಮೈಸೂರಿನಲ್ಲಿ ಬೇನಾಮಿ ಆಸ್ತಿ ಗಳಿಕೆ, ಭ್ರಷ್ಟಾಚಾರನಡೆದಿದೆ ಎಂಬ ಆರೋಪದಡಿ ತನಿಖೆ ನಡೆಸುವ ಸಾಧ್ಯತೆ ಇದೆ.
ಎರಡನೇ ಅಂಶವೆಂದರೆ, ಮುಡಾದಲ್ಲಿದ್ದ 387 ಕೋಟಿ ಹಣ ಬೇರೆ ಕ್ಷೇತ್ರಗಳ ಅಭಿವೃದ್ಧಿಗೆ ಬಳಕೆ ಮಾಡಲಾಗಿದೆ ಎಂಬ ಆರೋಪವಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಸ್ ದಾಖಲಾಗಿದೆ. ಈಗಾಗಲೇ ಇಡಿ ಇಸಿಐಆರ್ ದಾಖಲಿಸಿದೆ. ವರುಣಾ, ಶ್ರೀರಂಗಪಟ್ಟಣ ಕ್ಷೇತ್ರದ ಅಭಿವೃದ್ಧಿಗೆ ಪ್ರಭಾವ ಬಳಸಿ ಬಳಕೆ ಮಾಡಿದ ಆರೋಪ ಇದೆ. ಕಾನೂನು ಬಾಹಿರವಾಗಿ ಮುಡಾ ಹಣ ಬಳಕೆ ಮಾಡಲಾಗಿದೆ ಎಂಬ ಆರೋಪ ಇದ್ದು, ಇದರ ಬಗ್ಗೆಯೂ ತನಿಖೆ ಮಾಡುವ ಸಾಧ್ಯತೆ ಇದೆ.
2023ರ ಅಕ್ಟೋಬರ್ನಲ್ಲಿ ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಐಟಿ ದಾಳಿಯಾಗಿತ್ತು. ಆಗ ಉದ್ಯಮಿ ಹಾಗೂ ಗುತ್ತಿಗೆದಾರರ ಮನೆಗಳಲ್ಲಿ 40 ಕೋಟಿ ರೂಪಾಯಿಗೂ ಅಧಿಕ ಹಣ ಸಿಕ್ಕಿತ್ತು. ಅದು ಸಚಿವರೊಬ್ಬರಿಗೆ ಸೇರಿದ್ದು ಎನ್ನಲಾಗಿತ್ತು. ಮುಡಾಗೆ ಸಂಬಂಧಿಸಿದ ಹಣ ಎಂಬ ಗುಮಾನಿಯೂ ಇತ್ತು. ಇದಕ್ಕೆ ಸಂಬಂಧಿಸಿದಂತೆ ಇಡಿ ಅ„ಕಾರಿಗಳು ತನಿಖೆ ಮಾಡಬಹುದು.
ದಾಳಿ ಸಾಧ್ಯತೆ: ಮೂಲಗಳ ಪ್ರಕಾರ ಇ.ಡಿ ಅಧಿಕಾರಿಗಳು ಸಿದ್ದರಾಮಯ್ಯ ಅವರ ಆಪ್ತ ಬಣದಲ್ಲಿ ಗುರುತಿಸಿಕೊಂಡಿರುವ ಪ್ರಭಾವಿ ಸಚಿವರೊಬ್ಬರ ಮೇಲೆ ದಾಳಿ ನಡೆಸಲು ಸಜ್ಜಾಗಿದೆ ಎಂದು ಗೊತ್ತಾಗಿದೆ. ಸಿಎಂ ಅವರಿಗೆ ಅತ್ಯಂತ ನಿಕಟ ವ್ಯಕ್ತಿಯಾಗಿರುವ ಈ ಸಚಿವರು ಪ್ರಬಲ ಇಲಾಖೆಯ ಮುಖ್ಯಸ್ಥರಾಗಿದ್ದು, ಮುಡಾ ಪ್ರಕರಣದ ಪ್ರಮುಖ ದಾಖಲೆಗಳು ಇವರ ಬಳಿ ಇರಬಹುದೆಂಬ ಶಂಕೆ ಇ.ಡಿಗಿದೆ. ಹೀಗಾಗಿ ಪ್ರಭಾವಿ ಸಚಿವರ ನಿವಾಸ, ಕಚೇರಿ, ಸಂಬಂಧಿಕರು ಸೇರಿದಂತೆ ಮತ್ತಿತರ ಮೇಲೆ ಯಾವುದೇ ದಾಳಿ ನಡೆಯುವ ಸಂಭವವಿದೆ.
ಈ ಹಿಂದೆ ಮುಡಾ ಪ್ರಕರಣ ಆಚೆ ಬರುತ್ತಿದ್ದಂತೆ ಮೈಸೂರು ಜಿಲ್ಲಾಧಿಕಾರಿಗೆ ಬೆದರಿಕೆ ಹಾಕಿ ಪ್ರಮುಖ ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದಾರೆಂಬ ಆರೋಪ ಕೇಳಿಬಂದಿತ್ತು.ಇವೆಲ್ಲವನ್ನೂ ಗಮನಿಸಿಯೇ ಇ.ಡಿ ಸಿಎಂ ಆಪ್ತ ಸಚಿವರನ್ನು ಭೇಟಿಯಾಗಲು ಸಜ್ಜಾಗಿದೆ. ಹೀಗಾಗಿಯೇ ಗೋವಾ ಮತ್ತು ಚೆನ್ನೈನಿಂದ ಒಂದು ತಂಡ ಈಗಾಗಲೇ ಬೆಂಗಳೂರಿಗೆ ಆಗಮಿಸಿ, ಸಚಿವರ ನಿವಾಸ, ಕಚೇರಿ, ಫ್ಲ್ಯಾಟ್, ಸಂಬಂಧಿಕರ ಮನೆಗಳ ಬಗ್ಗೆ ಇಂಚಿಂಚು ಮಾಹಿತಿಯನ್ನು ಕಲೆ ಹಾಕಿದ್ದಾರೆ.
ಇನ್ನೊಂದೆಡೆ ಮೈಸೂರಿನಲ್ಲಿ ಈ ಹಿಂದೆ ಮುಡಾ ಅಧ್ಯಕ್ಷರಾಗಿದ್ದವರು, ಮುಡಾ ಆಯುಕ್ತರು, ಜನಪ್ರತಿನಿ„ಗಳು ಸೇರಿದಂತೆ ಮತ್ತಿತರರಿಗೂ ದಾಳಿಯ ಬಿಸಿ ತಟ್ಟುವ ಸಂಭವವಿದೆ.ಕೆಲವರು ಕಾನೂನು ಬಾಹಿರವಾಗಿ ಅಧಿಕಾರ ದುರುಪಯೋಗಪಡಿಸಿಕೊಂಡು ನಿವೇಶನ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಇ.ಡಿ ಇನ್ನಷ್ಟು ಆಳಕ್ಕೆ ಇಳಿದು ತನಿಖೆ ನಡೆಸಲು ಮುಂದಾಗಿದೆ.
ಬರುವ ದಿನಗಳಲ್ಲಿ ಸಿದ್ದರಾಮಯ್ಯ ಅವರ ಆಪ್ತರಿಗೆ ಇ.ಡಿ ಗಾಳ ಹಾಕಲು ತೆರೆಮರೆಯಲ್ಲಿ ಕಾರ್ಯಾಚರಣೆಗೆ ಇಳಿದಿದೆ. 2022ರಲ್ಲಿ ಲೋಕಾಯುಕ್ತ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಾಗಿದೆ.