ಭೂಕುಸಿತದಲ್ಲಿ ಕೊಚ್ಚಿಹೊದ ಮನೆ

Social Share

ಇಡುಕ್ಕಿ (ಕೇರಳ), ಆ.29-ಇಂದು ಮುಂಜಾನೆ ಸುರಿದ ಭಾರೀ ಮಳೆಯಿಂದ ಉಂಟಾದ ಭೂಕುಸಿತದಿಂದಾಗಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಮೂವರು ನಾಪತ್ತೆಯಾಗಿದ್ದಾರೆ. ಗುಡ್ಡಗಾಡು ಪ್ರದೇಶ ತೊಡುಪುಳ ಸಮೀಪದ ಕಂಜರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಗಿನ ಜಾವ 2.30ರ ಸುಮಾರಿಗೆ ಮನೆಗಳ ಮೇಲೆ ಬೆಟ್ಟದ ಮಣ್ಣು ಕುಸಿದು ಒಂದೇ ಕುಟುಂಬ ಇಬ್ಬರು ಸಾವನ್ನಪ್ಪಿದ್ದಾರೆ.
ಬೆಳಿಗ್ಗೆ ರಕ್ಷಣಾ ಸಿಬ್ಬಂದಿ ಇಬ್ಬರ ಮೃತದೇಹಗಳನ್ನು ಹೊರತೆಗೆದಿದ್ದಾರೆ.

ನಾಪತ್ತೆಯಾದವರ ಪತ್ತೆಗೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕೇರಳದ ಹಲವು ಗುಡ್ಡಗಾಡು ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ, ಜನಜೀವನ ಆಸ್ತವ್ಯಸ್ತವಾಗಿದೆ.

Articles You Might Like

Share This Article