ಕಾಂಗ್ರೆಸ್‍ಗೆ ಮುಖ್ಯಮಂತ್ರಿ ಚಂದ್ರು ಗುಡ್ ಬೈ, ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ

ಬೆಂಗಳೂರು,ಮೇ29- ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಡಾ.ಮುಖ್ಯಮಂತ್ರಿ ಚಂದ್ರು ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ಸಲ್ಲಿಸಿದ್ದಾರೆ.

ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದರಿಂದ ಪಕ್ಷದ ಸಾಂಸ್ಕøತಿಕ ಘಟಕದ ಅಧ್ಯಕ್ಷರನ್ನಾಗಿ ಪ್ರಕಟಿಸಿರುವ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಪ್ರಮೇಯವೇ ಉದ್ಭವಿಸುವುದಿಲ್ಲ ಎಂದು ಮುಖ್ಯಮಂತ್ರಿ ಚಂದ್ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದೀರ್ಘ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷಕ್ಕೆ ಜನಸೇವೆ ಮಾಡುವ ಉದ್ದೇಶದಿಂದ ಸೇರ್ಪಡೆಯಾಗಿದ್ದು, ಅಂದಿನಿಂದ ಪ್ರಾಮಾಣಿಕವಾಗಿ ಕೆಲಸ ಮಾಡಿದ ತೃಪ್ತಿಯಿದೆ. ಇದುವರೆಗೂ ಪಕ್ಷದಲ್ಲಿ ಬೆಂಬಲಿಸಿದ, ಪ್ರೀತಿಯನ್ನು ತೋರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಅವರು ಹೇಳಿದ್ದಾರೆ.