ಅಧಿಕೃತವಾಗಿ ಬಿಜೆಪಿ ಸೇರಿದ ಮುಲಾಯಂ ಸಿಂಗ್ ಯಾದವ್ ಕಿರಿ ಸೊಸೆ

Social Share

ಲಖನೌ, ಜ.19ಸಮಾಜವಾದಿ ಪಕ್ಷದ ಧುರೀಣ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರ ಕಿರಿಯ ಸೊಸೆ ಅಪರ್ಣಾ ಯಾದವ್ ಅವರು ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ನವದೆಹಲಿಯ ಬಿಜೆಪಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಯು.ಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಮತ್ತು ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಅವರ ಸಮ್ಮುಖದಲ್ಲಿ ಅಪರ್ಣಾ ಬಿಜೆಪಿಗೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ದೇಶ ಯಾವಾಗಲೂ ನನಗೆ ಮೊದಲು , ನಾನು ಪ್ರಧಾನಿ ಮೋದಿಯವರ ಕೆಲಸವನ್ನು ಮೆಚ್ಚುತ್ತೇನೆ ಪ್ರಸ್ತುತ ನಾನು ಬಿಜೆಪಿಗೆ ತುಂಬಾ ಕೃತಜ್ಞನಾಗಿದ್ದೇನೆ.ಎಂದು ಅವರು ಹೇಳಿದರು.
ನಂತರ ಅವರು ಬಿಜೆಪಿ ಅಧ್ಯಕ್ಷ ನಡ್ಡಾ,ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು ಉತ್ತರ ಪ್ರದೇಶದ ಬಕ್ಷಿ ಕಾ ತಲಾಬ್ ಕ್ಷೇತ್ರದಿಂದ ಅಪರ್ಣಾ ಕಣಕ್ಕೆ ಇಳಿಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಈ ಬೆಳವಣಿ ಭಾರಿ ಕುತೂಹಲ ಕೆರಳಿಸಿದ್ದು ಸಮಾಜವಾದಿ ಪಕ್ಷಕ್ಕೆ ಮುಜುಗರ ತಂದಿದೆ

Articles You Might Like

Share This Article