ಮುಂಬೈ,ಸೆ.14- ಮದುವೆಯಾಗುವು ದಾಗಿ ನಂಬಿಸಿ ಅತ್ಯಾಚಾರ ನಡೆಸಿದ್ದಲ್ಲದೆ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ತೆಲುಗು ನಟಿಯೊಬ್ಬರು ಜಿಮ್ ತರಬೇತುದಾರರನ ವಿರುದ್ದ ದೂರು ನೀಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಆದಿತ್ಯ ಕಪೂರ್ ಎಂದು ಹೇಳಲಾಗಿದ್ದು, ಮದುವೆಯಾಗುವುದಾಗಿ ಭರವಸೆ ನೀಡಿ ಅತ್ಯಾಚಾರವೆಸಗಿದ್ದಾನೆ ಎಂದು ದೂರಿ ನೀಡಿದ್ದು, ದಕ್ಷಿಣ ಮುಂಬೈನ ಕಫ್ ಪರೇಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಅರಬ್ಬಿ ಸಮುದ್ರದಲ್ಲಿ 200 ಕೋಟಿ ರೂ. ಡ್ರಗ್ಸ್ ವಶ, 6 ಪಾಕ್ ಪ್ರಜೆಗಳ ಬಂಧನ
ಆರೋಪಿ ನಟಿಯನ್ನು ಮದುವೆಯಾಗಲು ನಿರಾಕರಿಸಿರುವುದಲ್ಲದೆ ನಿಂದನೆ ಮತ್ತು ಹಲ್ಲೆ ನಡೆಸಿದ್ದಾನೆ. ಆರೋಪಿಯು ಮಹಿಳೆಯ ಕೆಲವು ಖಾಸಗಿ ಚಿತ್ರಗಳನ್ನು ಸಹ ಹೊಂದಿದ್ದು, ಅದನ್ನು ಬಹಿರಂಗಗೊಳಿಸುವುದಾಗಿ ಬ್ಲಾಕ್‍ಮೇಲ್ ಮಾಡುತ್ತಿದ್ದು ಕೊಲೆ ಬೆದರಿಕೆ ಕೂಡ ಹಾಕಿದ್ದಾನೆ ಎಂದು ಹೇಳಲಾಗಿದೆ.
ಭಾರತೀಯ ದಂಡ ಸಂಹಿತೆ 67 ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಕಾಯಿದೆಯ 67ಎ ಸೆಕ್ಷನ್ 376, 323, 504, 506(2) ಅಡಿ ಫಿಟ್‍ನೆಸ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ : ಮೈಸೂರು ಅರಮನೆಯಲ್ಲಿ ಗಂಡು ಮರಿಗೆ ನೀಡಿದ ಲಕ್ಷ್ಮಿ
ಮಹಿಳೆ 2016 ರಿಂದ ತೆಲುಗು ಉದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ ಮತ್ತು ಹಲವಾರು ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.