ಮುಂಬೈ ,ಅ.24- ಗ್ಯಾಂಗ್ ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿ ? 5 ಕೋಟಿ ಹಫ್ತಾಗೆ ಒತ್ತಾಯಿಸಿದ್ದ ಜೆಮ್ ಶೆಡ್‌ಪುರದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ
ಮುಂಬೈ ಪೊಲೀಸರ ಪ್ರಕಾರ, ಮುಂಬೈ ಟ್ರಾಫಿಕ್ ಪೊಲೀಸರಿಗೆ ಬೆದರಿಕೆ ಸಂದೇಶ ಬಂದ ನಂತರ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿತ್ತು. ಜೆಮ್ ಶೆಡ್‌ಪುರದ ಸ್ಥಳೀಯ ಪೊಲೀಸರ ಸಹಾಯದಿಂದ ತನಿಖೆ ನಡೆಸಲಾಯಿತು ಮತ್ತು ಇಂದು ಸಂದೇಶ ಕಳುಹಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಅವರನ್ನು ಮುಂಬೈಗೆ ಕರೆತರಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಅಕ್ಟೋಬರ್ 18 ರಂದು ಮುಂಬೈ ಟ್ರಾಫಿಕ್ ಪೊಲೀಸ್ ಕಂಟ್ರೋಲ್ ರೂಮ್ ಸಂಖ್ಯೆಗೆ ಆರಂಭಿಕ ಬೆದರಿಕೆ ಸಂದೇಶ ಕಳುಹಿಸಿದ್ದ ಆರೋಪಿ ನಂತರ ಕ್ಷಮೆ ಕೋರಿ ಸಂದೇಶವನ್ನು ತಪ್ಪಾಗಿ ಕಳುಹಿಸಲಾಗಿದೆ ಎಂದು ಸಬೂಬು ಹೇಳಿಕೊಂಡಿದ್ದ.
ಮುಂಬೈ ಪೊಲೀಸರ ಪ್ರಕಾರ, ಈ ಸಂದೇಶವನ್ನು ಕಳುಹಿಸಿದ ವ್ಯಕ್ತಿಯ ಸ್ಥಳವನ್ನು ಜಾರ್ಖಂಡ್‌ನಿಂದ ಟ್ರ್ಯಾಕ್ ಮಾಡಲಾಗಿದೆ. ಸಂದೇಶವನ್ನು ಕಳುಹಿಸಿದ ವ್ಯಕ್ತಿ ತಾನು ಲಾರೆನ್ಸ್ ಬಿಷ್ಣೋಯ್ ಅವರ ಗ್ಯಾಂಗ್‌ಗೆ ಹತ್ತಿರವಾಗಿರುವುದಾಗಿ ಹೇಳಿಕೊಂಡಿದ್ದಾನೆ ಮತ್ತು ಸುಲಿಗೆ ಹಣವನ್ನು ನೀಡದಿದ್ದರೆ ನಟನ ಜೀವಕ್ಕೆ ಅಪಾಯವನ್ನುಂಟು ಮಾಡುವುದಾಗಿ ಹೇಳಿಕೊಂಡಿದ್ದ