ಭಾರಿ ಮಳೆಗೆ ತತ್ತರಿಸಿದ ಮುಂಬೈ, ರೈಲು-ವಿಮಾನ ಸಂಚಾರ ವ್ಯತ್ಯಯ

ಮುಂಬೈ,ಜು.8- ವಾಣಿಜ್ಯ ನಗರಿ ಮುಂಬೈನಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರೈಲು ಮತ್ತು ವಿಮಾನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.ಭಾರೀ ಮಳೆಯಿಂದಾಗಿ ಮುಂಬೈನ ಪ್ರಮುಖ ರಸ್ತೆಗಳು, ರೈಲು ಮಾರ್ಗಗಳು ನೀರು ತುಂಬಿಕೊಂಡಿದ್ದು, ಸಂಚಾರದಲ್ಲಿ ಭಾರಿ ವ್ಯತ್ಯಾಸವಾಗಿದೆ. ಹವಾಮಾನ ವೈಪರಿತ್ಯದಿಂದ ವಿಮಾನ ಸಂಚಾರದಲ್ಲೂ ವ್ಯತ್ಯಯಗೊಂಡಿರುವುದರಿಂದ ಜನರು ಪರದಾಡುವಂತಾಗಿದೆ. ಹವಾಮಾನ ಇಲಾಖೆ ಪ್ರಕಾರ ಇಂದು ಕೂಡ ಇಡೀ ದಿನ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ರೆಡ್ ಅಲರ್ಟ್‌ ಘೋಷಿಸಲಾಗಿದ್ದು, ಮುಂಬೈನಲ್ಲಿ ನಿನ್ನೆ ಒಂದೇ ದಿನ ದಾಖಲೆಯ 300 ಮಿ.ಮೀ. ಮಳೆಯಾಗಿದೆ. … Continue reading ಭಾರಿ ಮಳೆಗೆ ತತ್ತರಿಸಿದ ಮುಂಬೈ, ರೈಲು-ವಿಮಾನ ಸಂಚಾರ ವ್ಯತ್ಯಯ