ಬೆಂಗಳೂರು,ಡಿ.18- ಬಿಲ್ಡರ್ ಒಬ್ಬರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಕೆಲಸಗಾರನನ್ನು ಉಸಿರುಗಟ್ಟಿಸಿ ಕೊಲೆ ಮಾಡಿ 5 ಲಕ್ಷ ನಗದು ಹಾಗೂ ಭಾರೀ ಪ್ರಮಾಣದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಕಳೆದ ರಾತ್ರಿ ಕೋರಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೊಲೆಯಾಗಿರುವ ವ್ಯಕ್ತಿಯನ್ನು ಕರಿಯಪ್ಪ ಎಂದು ಗುರುತಿಸಲಾಗಿದೆ. ಈತ ಕೋರಮಂಗಲ 6ನೇ ಬ್ಲಾಕ್ನಲ್ಲಿರುವ ರಾಜಗೋಪಾಲ ರೆಡ್ಡಿ ಅವರ ಮನೆಯಲ್ಲಿ ಕೆಲಸ ಮಾಡುಕೊಂಡಿದ್ದ.
ನಿನ್ನೆ ರೆಡ್ಡಿ ಮನೆಯವರೆಲ್ಲರೂ ಸಂಬಂಕರ ಶುಭ ಕಾರ್ಯಕ್ರಮವೊಂದಕ್ಕೆ ಹೋಗಿದ್ದರು. ಸೆಕ್ಯೂರಿಟಿಗಾರ್ಡ್ ಹಾಗೂ ಮನೆಯ ಕೆಲಸಗಾರ ಮಾತ್ರ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ಪ್ರತಿಧ್ವನಿಸಲಿವೆ ರಾಜ್ಯದ ಜ್ವಲಂತ ಸಮಸ್ಯೆಗಳು
ಕಳೆದ ರಾತ್ರಿ ಮನೆಗೆ ನುಗ್ಗಿರುವ ದುಷ್ಕರ್ಮಿಗಳು ಕೆಲಸಗಾರನ ಕೈಕಾಲು ಕಟ್ಟಿ ಹಾಕಿ, ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ನಂತರ ಮನೆಯ ಕೊಠಡಿಗಳನ್ನೆಲ್ಲ ಜಾಲಾಡಿ 5 ಲಕ್ಷ ನಗದು ಹಾಗೂ ಅಪಾರ ಪ್ರಮಾಣದ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದ್ದಾರೆ.
ಇಂದು ಬೆಳಗ್ಗೆ ಅಡುಗೆಯವರು ಬಂದಾಗ ಕೊಲೆ ನಡೆದಿರುವುದು ಗೊತ್ತಾಗಿ ತಕ್ಷಣ ಮಾಲೀಕರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರಿಗೆ ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಾಥಮಿಕ ತನಿಖೆ ಸಂದರ್ಭದಲ್ಲಿ ಮನೆಯ ಕಾವಲುಗಾರ ಕೂಡ ನಾಪತ್ತೆಯಾಗಿರುವುದು ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.
#Murder, #Robbery, #Bengaluru,