ಹರ್ಷ ಕೊಲೆ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ವಾಟಾಳ್ ಆಗ್ರಹ

Social Share

ಬೆಂಗಳೂರು, ಫೆ.22- ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣವನ್ನು ಉನ್ನತ ಮಟ್ಟದ ತನಿಖೆ ನಡೆಸಬೇಕು. ಮೃತರ ಕುಟುಂಬಕ್ಕೆ 25 ಲಕ್ಷ ರೂ.ಗಳ ಪರಿಹಾರ ನೀಡಬೇಕೆಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.
ಮೈಸೂರಿನ ಆರ್ ಗೇಟ್ ಬಳಿ ಪ್ರತಿಭಟನೆ ನಡೆಸಿದ ಅವರು, ಕೊಲೆಗೆ ಕಾರಣರಾದವರನ್ನು ಎಡೆಮುರಿ ಕಟ್ಟಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಮೃತರ ಕುಟುಂಬದವರಿಗೆ ಕನಿಷ್ಠ 25 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಕೊಲೆಯ ಹಿಂದೆ ಯಾವುದೇ ಶಕ್ತಿಗಳಿದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಘಟನೆ ಹಿಂದೆ ಪೊಲೀಸ್ ವೈಫಲ್ಯ ಎದ್ದು ಕಾಣುತ್ತಿದೆ. ಸದ್ಯ ಶಿವಮೊಗ್ಗದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಬೇಕು ಎಂದು ಹೇಳಿದರು.
ಟಿಪ್ಪು ಎಕ್ಸ್‍ಪ್ರೆಸ್ ರೈಲಿನ ಹೆಸರನ್ನು ಬದಲಾವಣೆ ಮಾಡಲು ಹೇಳಿರುವ ಸಂಸದ ಪ್ರತಾಪ್‍ಸಿಂಹ ಅವರ ಹೇಳಿಕೆಯನ್ನು ಖಂಡಿಸಿದ ಅವರು, ಸಂಸದರು ಇಂತಹ ಅನಗತ್ಯ ಹೇಳಿಕೆಗಳನ್ನು ಕೊಡುವುದನ್ನು ನಿಲ್ಲಿಸಬೇಕು.
ಟಿಪ್ಪು ಅವರು ಸ್ವಾತಂತ್ರ್ಯಕ್ಕಾಗಿ ಅಪರಿಮಿತ ಹೋರಾಟ ಮಾಡಿದ್ದಾರೆ. ನಾಗರಹೊಳೆ ಹೆಸರು ಬದಲಾಯಿಸಿ ಕಾರ್ಯಪ್ಪ ಹೆಸರಿಡುವಂತೆ ಹೇಳಿದ್ದಾರೆ.
ಅದೇ ರೀತಿ ಟಿಪ್ಪು ಎಕ್ಸ್‍ಪ್ರೆಸ್ ರೈಲಿನ ಹೆಸರು ಬದಲಾಯಿಸುವಂತೆ ಹೇಳುವಂತಹ ಹೇಳಿಕೆಗಳನ್ನು ಬಿಟ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಲಿ ಎಂದು ಹೇಳಿದ್ದಾರೆ.

Articles You Might Like

Share This Article