ಬೆಂಗಳೂರು,ಆ.30- ಚಿತ್ರದುರ್ಗದ ಮುರುಘಾ ಶರಣರ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಸಂತ್ರಸ್ಥ ಬಾಲಕಿಯರನ್ನು ಇಂದು ನ್ಯಾಯಾೀಶರ ಮುಂದೆ ಹಾಜರು ಪಡಿಸಿ ಸ್ವಯಂ ಪ್ರೇರಿತ ಹೇಳಿಕೆ ದಾಖಲಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸದ್ಯದಲ್ಲೇ ಶ್ರೀಗಳನ್ನು ವಿಚಾರಣೆ ನಡೆಸುವ ಸಂಭವವಿದೆ.
ಅತ್ಯಾಚಾರದಂತಹ ಪ್ರಕರಣದಲ್ಲಿ ಸಂತ್ರಸ್ಥರಿಂದ ಸಿಆರ್ಪಿಸಿ ಸೆಕ್ಷನ್ 164 ಅಡಿ ಸ್ವಪ್ರೇರಿತ ಹೇಳಿಕೆ ದಾಖಲಿಸಲಾಗುತ್ತಿದೆ. ಹೇಳಿಕೆ ದಾಖಲಿಸುವ ಸಂದರ್ಭದಲ್ಲಿ ನ್ಯಾಯಾೀಶರು ಮತ್ತವರ ಸಿಮೀತ ಸಿಬ್ಬಂದಿ ಮಾತ್ರ ಹಾಜರಿರಲಿದ್ದಾರೆ. ಈ ಹೇಳಿಕೆ ಪ್ರಕರಣದಲ್ಲಿ ಮಹತ್ವದ ಸಾಕ್ಷ್ಯವಾಗಿ ಪರಿಗಣಿಸಲಾಗುತ್ತದೆ.
ಮುರುಘಾ ಮಠದ ವಸತಿ ನಿಲಯದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರನ್ನು ಶ್ರೀಗಳು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮೈಸೂರಿನ ಒಡನಾಡಿ ಸಂಸ್ಥೆಯ ಪ್ರಯತ್ನದಿಂದ ಮೈಸೂರಿನಲ್ಲಿ ಪೊೀಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು, ನಂತರ ದೂರು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಗೆ ಸ್ಥಳಾಂತರಿಸಲಾಗಿದ್ದು, ಈಗಾಗಲೇ ಸಂತ್ರಸ್ಥ ವಿದ್ಯಾರ್ಥಿನಿಯರ ಹೇಳಿಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.
ಮುಂದಿನ ಹಂತವಾಗಿ ಬಾಲಕಿಯರಿಂದ ಸೆಕ್ಷನ್ 164 ಅಡಿ ಹೇಳಿಕೆ ದಾಖಲಿಸಲಾಗುತ್ತದೆ. ನಂತರ ಶ್ರೀಗಳ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಪ್ರಕರಣ ಬಯಲಿಗೆ ಬಂದ ಬಳಿಕ ಶ್ರೀಮಠಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ. ಬಾಲಕಿಯರನ್ನು ಬಾಲಮಂದಿರದಲ್ಲಿ ಇರಿಸಲಾಗಿದೆ.
ಪ್ರಕರಣ ದಾಖಲಾದ ಬಳಿಕ ಅಜ್ಞಾತಕ್ಕೆ ತೆರಳಿದ್ದ ಶ್ರೀ ಮುರುಘಾ ಶರಣರು ನಿನ್ನೆ ಸಾರ್ವಜನಿಕವಾಗಿ ಕಾಣಿಸಿಕೊಂಡು ಶ್ರೀಮಠದಲ್ಲಿ ತಮ್ಮ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದರು. ಜೊತೆಗೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಸಿದಂತೆ ನಿರೀಕ್ಷಣಾ ಜಾಮೀನು ಕೋರಿ ಚಿತ್ರದುರ್ಗದ 2ನೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಹೈಪೊ್ರೀಫೈಲ್ ಪ್ರಕರಣದಲ್ಲಿ ಪೊಲೀಸರು ಎಚ್ಚರಿಕೆಯ ಹೆಜ್ಜೆ ಇಡುತ್ತಿದ್ದು, ತಾಂತ್ರಿಕ ಹಾಗೂ ಜೈವಿಕ ಸಾಕ್ಷ್ಯಗಳ ಸಂಗ್ರಹಕ್ಕೆ ಒತ್ತು ನೀಡುತ್ತಿದ್ದಾರೆ. ಬೆಳಗಾವಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್, ಪ್ರಕರಣದಲ್ಲಿ ಕಾನೂನು ರಿತ್ಯಾ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.