Saturday, July 13, 2024
Homeರಾಜ್ಯನಾಳೆ ನಾಡಹಬ್ಬ ದಸರಾಗೆ ಚಾಲನೆ ನೀಡಲಿದ್ದಾರೆ ನಾದಬ್ರಹ್ಮ ಹಂಸಲೇಖ

ನಾಳೆ ನಾಡಹಬ್ಬ ದಸರಾಗೆ ಚಾಲನೆ ನೀಡಲಿದ್ದಾರೆ ನಾದಬ್ರಹ್ಮ ಹಂಸಲೇಖ

ಮೈಸೂರು, ಅ. 14- ಜಗದ್ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ನಾಳೆ ಬೆಳಿಗ್ಗೆ 10-15ರಿಂದ 10.30 ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ನಾದಬ್ರಹ್ಮ ಡಾ. ಹಂಸಲೇಖ ಅವರು ಚಾಲನೆ ನೀಡಲಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಪ್ರಹ್ಲಾದ ಜೋಶಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿರುವರು.

ಕ್ರಿಸ್ಟಿಯಾನೊ ರೊನಾಲ್ಡೊಗೆ ಕಾದಿದೆ 99 ಛಡಿ ಏಟಿನ ಶಿಕ್ಷೆ..!

ಈ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಜಿ.ಟಿ. ದೇವೇಗೌಡ ಅವರು ವಹಿಸಲಿದ್ದಾರೆ. ನಾಳೆ ಸಂಜೆ ಅರಮನೆ ಆವರಣದಲ್ಲಿ 7 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಸರಾ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.

ಬೆಳಿಗ್ಗೆ ದಸರಾ ಚಲನಚಿತ್ರೋತ್ಸವ, ವಸ್ತು ಪ್ರದರ್ಶನ, ಕುಸ್ತಿ ಪಂದ್ಯಾವಳಿ, ಫಲಪುಷ್ಪ ಪ್ರದರ್ಶನ ಉದ್ಘಾಟನಾ ಕಾರ್ಯಕ್ರಮಗಳು ನೆರವೇರಲಿವೆ. ಮುಂಜಾಗ್ರತಾ ಕ್ರಮವಾಗಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

RELATED ARTICLES

Latest News