ಪಾಟ್ನಾ,ಮಾ.23- ವಕ್ಫ್ ಮಸೂದೆಗೆ ಬೆಂಬಲವನ್ನು ಅವರ ವಿರೋಧಿಸಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಇಫ್ತಾರ್ ಆಹ್ವಾನವನ್ನು ತಿರಸ್ಕರಿಸುತ್ತಿರುವುದಾಗಿ ಬಿಹಾರದ ಪ್ರಮುಖ ಮುಸ್ಲಿಂ ಸಂಘಟನೆ ಘೋಷಿಸಿದೆ.
ಬಿಹಾರ, ಜಾರ್ಖಂಡ್ ಮತ್ತು ಒಡಿಶಾದಾದ್ಯಂತ ಅನುಯಾಯಿಗಳನ್ನು ಹೊಂದಿದ್ದಾರೆಂದು ಹೇಳಿಕೊಳ್ಳುವ ಇಮಾರತ್ ಷರಿಯಾ, ಮುಖ್ಯಮಂತ್ರಿಗಳ ನಿವಾಸದಲ್ಲಿ ಇಂದು ನಡೆಯಲಿದ್ದ ಇಫ್ತಾರ್ ಆಹ್ವಾನಕ್ಕೆ ಪ್ರತಿಕ್ರಿಯೆಯಾಗಿ ತನ್ನ ಹೇಳಿಕೆಯನ್ನು ಬಿಡುಗಡೆ ಮಾಡಿದೆ.
ಸದ್ಯ ರಂಜಾನ್ ಆಚರಣೆ ನಡೆಯುತ್ತಿದೆ. ಸಿಎಂ ನಿತೀಶ್ ಕುಮಾರ್ ಇಫ್ತಾರ್ ಕೂಟ ಆಯೋಜಿಸಿದ್ದಾರೆ. ಆದರೆ ಈ ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ಮುಸ್ಲಿಂ ಸಂಘಟನೆಯೊಂದು ಘೋಷಿಸಿದೆ. ಇದಕ್ಕೆ ರಾಜಕೀಯ ಕಾರಣ ನೀಡಿದೆ.
ಮುಖ್ಯಮಂತ್ರಿ ನಿವಾಸದಲ್ಲಿ ನಡೆಯುವ ಇಫ್ತಾರ್ ಕೂಟದ ಆಹ್ವಾನವನ್ನು ತಿರಸ್ಕರಿಸಿದ್ದಾಗಿ ಇಮಾರತ್ ಶರಿಯಾ ಹೇಳಿದೆ. ಕೇಂದ್ರ ಸರ್ಕಾರ ಜಾರಿ ಮಾಡಲು ಉದ್ದೇಶಿಸಿರುವ ವಕ್ಸ್ ಮಸೂದೆಯನ್ನು ಜೆಡಿಯು ಬೆಂಬಲಿಸಿದ್ದರಿಂದ ಸಿಎಂ ಆಯೋಜಿಸಿರುವ ಕೂಟದಲ್ಲಿ ತಾವು ಭಾಗಿಯಾಗುವುದಿಲ್ಲ ಎಂದು ಬಿಹಾರ, ಜಾರ್ಖಂಡ್ ಮತ್ತು ಒಡಿಶಾದಲ್ಲಿ ಅನುಯಾಯಿಗಳನ್ನು ಹೊಂದಿದ್ದಾಗಿ ಹೇಳಿಕೊಳ್ಳುವ ಸಂಘಟನೆ ತಿಳಿಸಿದೆ.
ಮುಸ್ಲಿಮರ ಆರ್ಥಿಕ ಮತ್ತು ಶೈಕ್ಷಣಿಕ ಹಿಂದುಳಿದಿರುವಿಕೆಯನ್ನು ಇನ್ನಷ್ಟು ಹದಗೆಡಿಸುವ ಬೆದರಿಕೆ ಹಾಕುವ ವಕ್ಸ್ ಮಸೂದೆಗೆ ನಿತೀಶ್ ಕುಮಾರ್ ಬೆಂಬಲ ನೀಡಿದ್ದನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನೀವು, ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವ ಜಾತ್ಯತೀತ ಆಡಳಿತದ ಭರವಸೆ ನೀಡಿ ಅಧಿಕಾರಕ್ಕೆ ಬಂದಿದ್ದೀರಿ. ಆದರೆ, ಬಿಜೆಪಿಯೊಂದಿಗಿನ ಮೈತ್ರಿ ಮತ್ತು ಸಂವಿಧಾನಬಾಹಿರ ಮಸೂದೆಗೆ ಬೆಂಬಲ ನೀಡುವ ಮೂಲಕ ಬದ್ಧತೆಯ ವಿರುದ್ಧ ನಡೆದುಕೊಂಡಿದ್ದಾಗಿ ಶರಿಯಾ ಟೀಕಿಸಿದೆ.
ಈ ಇಫ್ತಾರ್ ಕೂಟವು ಟೋಕನಿಸಂ ಆಗಿದೆ. ಮುಸ್ಲಿಮರ ಬಗೆಗಿನ ನಿಮ್ಮ ಅಸಡ್ಡೆ ಮತ್ತು ಔಪಚಾರಿಕ ಕಾರ್ಯಮ್ರಮಗಳು ಅರ್ಥಹೀನ, ಮತಕ್ಕಾಗಿ ಮಾತ್ರ ನಮ್ಮ ಸಮುದಾಯವನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಸಿಎಂಗೆ ಬರೆದ ಪತ್ರದಲ್ಲಿ ಸಂಘಟನೆ ಆರೋಪಿಸಿದೆ. ಈ ವರ್ಷಾಂತ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿಯೊಂದಿಗೆ ಜೆಡಿಯೂ ಅಧಿಕಾರವನ್ನು ಹಂಚಿಕೊಂಡಿದೆ.
ಬಿಹಾರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದೆ. ರಾಜಕೀಯ ಪಕ್ಷಗಳ ಚಟುವಟಿಕೆಗಳೂ ಗರಿಗೆದರಿವೆ. ಬಿಜೆಪಿ ಮತ್ತು ಜೆಡಿಯು ಮೈತ್ರಿ ಸರ್ಕಾರ ಮತ್ತೊಮ್ಮೆ ಅಧಿಕಾರದ ಗದ್ದುಗೆಗೇರುವ ನಿರೀಕ್ಷೆಯಲ್ಲಿವೆ.