Saturday, September 21, 2024
Homeರಾಷ್ಟ್ರೀಯ | Nationalಲವ್ ಜಿಹಾದ್ ಆರೋಪ: ಪುಣೆ ವಿಶ್ವವಿದ್ಯಾಲಯದ ವಿದ್ಯಾರ್ಥಿ ಮೇಲೆ ಹಲ್ಲೆ

ಲವ್ ಜಿಹಾದ್ ಆರೋಪ: ಪುಣೆ ವಿಶ್ವವಿದ್ಯಾಲಯದ ವಿದ್ಯಾರ್ಥಿ ಮೇಲೆ ಹಲ್ಲೆ

ಪುಣೆ, ಅ 11 (ಪಿಟಿಐ) : ಇಲ್ಲಿನ ವಿಶ್ವವಿದ್ಯಾನಿಲಯದಲ್ಲಿ ಲವ್ ಜಿಹಾದ್‍ನಲ್ಲಿ ತೊಡಗಿದ್ದೀಯ ಎಂದು ಆರೋಪಿಸಿ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಗಳನ್ನು ಬಂಧಿಸಲು ಪುಣೆ ಪೊಲೀಸರು ವಿಶೇಷ ತಂಡಗಳನ್ನು ರಚಿಸಿದ್ದಾರೆ. ಇತ್ತೀಚೆಗೆ ಸಾವಿತ್ರಿಬಾಯಿ ಎಂಬ ವಿದ್ಯಾರ್ಥಿನಿ ಫುಲೆ ಪುಣೆ ವಿಶ್ವವಿದ್ಯಾಲಯದ (ಎಸ್‍ಪಿಪಿಯು) ಕ್ಯಾಂಪಸ್‍ನಲ್ಲಿ ತನ್ನು ಇಬ್ಬರು ಸಹಪಾಠಿಗಳ ಜೊತೆಯಲ್ಲಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿಯು ಇಬ್ಬರು ಮಹಿಳಾ ಸ್ನೇಹಿತರ ಜೊತೆಗೆ ಊಟ ಮುಗಿಸಿ ಹಿಂತಿರುಗುತ್ತಿದ್ದಾಗ ದ್ವಿಚಕ್ರವಾಹನದಲ್ಲಿ ನಾಲ್ಕೈದು ಅಪರಿಚಿತ ವ್ಯಕ್ತಿಗಳು ವಿಶ್ವವಿದ್ಯಾನಿಲಯದ ಕ್ಯಾಂಪಸ್‍ನಲ್ಲಿ ತಡೆದು ಪ್ರಶ್ನಿಸಲು ಪ್ರಾರಂಭಿಸಿದರು, ಆಧಾರ್ ಕಾರ್ಡ್ ತೋರಿಸಲು ಕೇಳಿದ್ದಾರೆ.

ಒಬ್ಬ ಲವ್ ಜಿಹಾದ್‍ನಲ್ಲಿ ತೊಡಗಿಸಿಕೊಳ್ಳಲು ವಿಶ್ವವಿದ್ಯಾಲಯಕ್ಕೆ ಬಂದಿದ್ದಾನೆ ಎಂದು ಅಲ್ಲಿಯೇ ಆಕೆಯ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪುಣೆ ಪೊಲೀಸ್ ಕಮಿಷನರ್ ಅಮಿತೇಶ್ ಕುಮಾರ್ ಈ ಕುರಿತು ಮಾತನಾಡಿ ನಾವು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ.

ಇದೀಗ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಆರೋಪಿಗಳನ್ನು ಪತ್ತೆಹಚ್ಚಲಾಗುತ್ತಿದೆ ಮತ್ತು ಅವರನ್ನು ಬಂಧಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದರು. ಘಟನೆಯ ತನಿಖೆಗಾಗಿ ವಿಶ್ವವಿದ್ಯಾನಿಲಯವು ಸತ್ಯಶೋಧನಾ ಸಮಿತಿಯನ್ನು ರಚಿಸಿದೆ ಎಂದು ಎಸ್‍ಪಿಪಿಯು ರಿಜಿಸ್ಟ್ರಾರ್ ವಿಜಯ್ ಖರೆ ಹೇಳಿದ್ದಾರೆ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕುವ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ಭದ್ರತಾ ಸಿಬ್ಬಂದಿಗೆ ಸೂಚಿಸಲಾಗಿದೆ.

RELATED ARTICLES

Latest News