ಶಿವಮೊಗ್ಗ, ಮಾ.19- ಜಿಲ್ಲಾಧಿಕಾರಿ ಕಚೇರಿ ಮೇಲೆ ನಿಂತು ಯುವಕನೊಬ್ಬ ಆಜಾನ್ ಕೂಗಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ. ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಆಜಜಾನ್ ಬಗ್ಗೆ ನೀಡಿದ್ದ ಹೇಳಿಕೆಯನ್ನು ಖಂಡಿಸಿ ಎರಡು ದಿನಗಳ ಹಿಂದೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಮುಸ್ಲಿಮರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಯುವಕ ಕಚೇರಿ ಆವರಣದಲ್ಲಿ ನಿಂತು ಆಜಾನ್ ಕೂಗಿದ್ದ.
ಪ್ರತಿಭಟನೆ ವೇಳೆ ಮುಸ್ಲಿಂ ಯುವಕನೊಬ್ಬ ಜಿಲ್ಲಾಧಿಕಾರಿ ಕಚೇರಿ ಮೇಲೆ ಹತ್ತಿ ಆಜಾನ್ ಕೂಗಿ ಉದ್ದಟತನ ಪ್ರದರ್ಶಿಸಿದ್ದ. ಎರಡು ದಿನಗಳ ಹಿಂದೆ ನಡೆದಿದ್ದ ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಯುವಕ ಆಜಾನ್ ಕೂಗುತ್ತಿದ್ದ ಸ್ಥಳೀಯರ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ಘಟನೆಗೆ ಸಂಬಂಸಿದಂತೆ ಆಜಾನ್ ಕೂಗುವುದಕ್ಕೆ ಪೊಲೀಸರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದೆ.
20 ವರ್ಷದಿಂದ ಮನೆಯಲ್ಲೇ ಬಂಧಿಯಾಗಿದ್ದ ಅಣ್ಣ-ತಂಗಿಯ ರಕ್ಷಣೆ
ಜಿಲ್ಲಾಧಿಕಾರಿ ಕಚೇರಿ ಮೇಲೆ ಆಜಾನ್ ಕೂಗದಂತೆ ಪೊಲೀಸರ ತಾಕೀತು ನಡೆಸಿದ್ದಾರೆ. ಈ ವೇಳೆ ಮತ್ತೋರ್ವ ಯುವಕ ಪ್ರಚೋದನಕಾರಿಯಾಗಿ ಹೇಳಿಕೆ ನೀಡಿದ್ದಾನೆ. ಆಜಾನ್ ಬಗ್ಗೆ ಮಾತನಾಡುವುದಕ್ಕೆ ಈಶ್ವರಪ್ಪ ಯಾರು? ಇವತ್ತು ಇಲ್ಲಿ ಕೂಗಿದ್ದೇವೆ? ನಾಳೆ ವಿಧಾನಸೌಧದಲ್ಲಿ ಕೂಗುತ್ತೇವೆ. ಇದು ತಾಯಿ ಬಗ್ಗೆ ಮಾತನಾಡಿದ್ದಲ್ಲ ಅಲ್ಲಾಹ ಬಗ್ಗೆ ಮಾತನಾಡಿದ್ದು ಎಂದು ಕಿಡಿಕಾರಿದ್ದಾನೆ.
ಘಟನೆಯ ವೇಳೆ ಆಜಾನ್ ಕೂಗಿ ಉದ್ಧಟತನ ತೋರಿದ ಯುವಕನಿಗೆ ಮುಸ್ಲಿಂ ಮುಖಂಡರು ಯುವಕನಿಗೆ ಬೈದು ಬುದ್ಧಿ ಹೇಳಿದ್ದಾರೆ. ನಂತರ ಪ್ರತಿಭಟನಾಕಾರರನ್ನು ಸ್ಥಳದಿಂದ ಪೆÇಲೀಸರು ವಾಪಸ್ ಕಳುಹಿಸಿದ್ದಾರೆ.
ಇನ್ನು ಘಟನೆ ಸಂಬಂಧ ಮಂಡ್ಯ ತಾಲೂಕಿನ ಮಾಚಹಳ್ಳಿಯಲ್ಲಿ ಊ.ಆ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಡಿಸಿ ಕಚೇರಿ ಮೇಲೆ ಆಜಾನ್ ಕೂಗಿರುವುದು ಸೂಕ್ಷ್ಮವಾದ ವಿಚಾರ. ರಾಜ್ಯದಲ್ಲಿ ಇಂತಹ ಘಟನೆ ಪ್ರಾರಂಭ ಆಗುವುದಕ್ಕೆ ಬಿಜೆಪಿ ಕಾರಣ. ಜೊತೆಗೆ ಇನ್ನೊಂದು ಧರ್ಮದ ಕೆಲ ಕಿಡಿಗೇಡಿಗಳ ಪಾತ್ರವೂ ಇದೆ. ಇವತ್ತು ಭಾರತ ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು. ಚಿತಾವಣೆ ಮಾಡುವವರ ವಿರುದ್ಧ ಕಠಿಣವಾದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಭಾರತ-ಬಾಂಗ್ಲಾ ನಡುವೆ ರೈಲ್ವೆ ಮಾರ್ಗ ಕಾಮಗಾರಿ ಚುರುಕುಗೊಳಿಸಲು ಕ್ರಮ
ಮಂಗಳೂರಿನ ಕಾವೂರಿನ ಶಾಂತಿನಗರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಕೆ.ಎಸ್. ಈಶ್ವರಪ್ಪ ಭಾಷಣ ಮಾಡುತ್ತಿದ್ದ ವೇಳೆ ಸ್ಥಳೀಯ ಮಸೀದಿಯಿಂದ ಆಜಾನ್ ಕೇಳಿ ಬಂದಿತ್ತು. ಇದರಿಂದ ಸಿಡಿಮಿಡಿಗೊಂಡ ಈಶ್ವರಪ್ಪ ಆಜಾನ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ನಾನು ಎಲ್ಲಿ ಹೋದರೂ ಇದೊಂದು ತಲೆನೋವು. ಮೈಕ್ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ? ಮೈಕ್ ಹಿಡ್ಕೊಂಡು ಮಾತ್ರ ಹೇಳಿದರೆ ಅವನಿಗೆ ಕಿವುಡಾ ಅನ್ನುತ್ತೇವೆ. ಸುಪ್ರೀಂಕೋರ್ಟ್ ಆದೇಶವಿದ್ದು ಇಂದಲ್ಲ, ನಾಳೆ ಈ ಸಮಸ್ಯೆ ಇತ್ಯರ್ಥವಾಗಲಿದೆ. ಇದರಲ್ಲಿ ಯಾವುದೇ ಅನುಮಾನಬೇಡ.
ಪಾಕಿಸ್ತಾನದಲ್ಲಿ ಇಮ್ರಾನ್‍ಖಾನ್ ಪಕ್ಷವನ್ನೇ ನಿಷೇಧಿಸಲು ಚರ್ಚೆ
ಎಲ್ಲಾ ಧರ್ಮಗಳಿಗೆ ಗೌರವ ಕೊಡಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳುತ್ತಾರೆ. ಮೈಕ್ನಲ್ಲಿ ಕೂಗಿದ್ದಲ್ಲಿ ಮಾತ್ರವೇ ಅಲ್ಲಾಗೆ ಕಿವಿ ಕೇಳುವುದಾ? ನಮ್ಮ ದೇವಸ್ಥಾನಗಳಲ್ಲೂ ಪೂಜೆ ಮಾಡುತ್ತೇವೆ. ಶ್ಲೋಕ, ಭಜನೆಗಳನ್ನು ಹೇಳಲಾಗುತ್ತದೆ. ಅವರಿಗಿಂತ ಹೆಚ್ಚು ಭಕ್ತಿ ನಮ್ಮಲ್ಲೂ ಇದೆ. ಪ್ರಪಂಚದಲ್ಲಿ ಧರ್ಮವನ್ನು ಉಳಿಸುವಂತಹ ದೇಶ ಭಾರತ ಮಾತ್ರ ಎಂದು ಹೇಳಿದ್ದರು.
muslim, youth, perform, azaan, outside, shivamogga, dc office,