Wednesday, May 22, 2024
Homeರಾಜ್ಯಜ.22ರಂದು ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ

ಜ.22ರಂದು ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ

ಬೆಂಗಳೂರು, ಜ.7-ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಜನವರಿ 22ರಂದು ಶ್ರೀರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯ ಜರುಗಲಿದೆ. ಈ ನಿಟ್ಟಿನಲ್ಲಿ ಅಂದು ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸುವಂತೆ ರಾಜ್ಯ ಸರ್ಕಾರ ನಿರ್ದೇಶನ ನೀಡಿದೆ.

ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಈ ನಿರ್ದೇಶನ ನೀಡಿದ್ದಾರೆ. ಪ್ರಾಣ ಪ್ರತಿಷ್ಠಾಪನಾ ಸಮಯವಾದ ಹನ್ನೆರಡು ಗಂಟೆ 29 ನಿಮಿಷ 8 ಸೆಕೆಂಡ್‍ನಿಂದ 12 ಗಂಟೆ 30 ನಿಮಿಷ 32 ಸೆಕೆಂಡ್ ಸಮಯದಲ್ಲಿ ಏಕಕಾಲದಲ್ಲಿ ಎಲ್ಲಾ ದೇವಸ್ಥಾನಗಳಲ್ಲಿ ಮಹಾಮಂಗಳಾರತಿ ನಡೆಸಿ ದೇಶ, ರಾಜ್ಯಕ್ಕೆ ಶ್ರೀರಾಮನ ರಕ್ಷಣೆ ಇರಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಸೂಚಿಸಲಾಗಿದೆ.

ತೈವಾನ್‍ಗೆ ಶಸ್ತ್ರಾಸ್ತ್ರ ಮಾರಾಟ ಮಾಡಿದ ಅಮೇರಿಕಾದ 5 ಕಂಪನಿಗಳಿಗೆ ಚೀನಾ ನಿರ್ಬಂಧ

ಜನವರಿ 22ರಂದು 51 ಇಂಚು ಎತ್ತರದ ರಾಮಲಲ್ಲಾ ವಿಗ್ರಹವು ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಸ್ಥಾಪನೆಯಾಗಲಿದೆ. ವಿಗ್ರಹಕ್ಕೆ ಜನವರಿ 16ರಿಂದ ಮಸ್ತಕಾಭಿಷೇಕ ಪ್ರಾರಂಭವಾಗಲಿದೆ. ಏಳು ದಿನಗಳ ಕಾಲ ಈ ಧಾರ್ಮಿಕ ಕೈಂಕರ್ಯ ನಡೆಯಲಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಈಗಾಗಲೇ ತಿಳಿಸಿದೆ.

RELATED ARTICLES

Latest News