ನನ್ನ ಪಾಲಿಸಿ ನನ್ನ ಕೈಯಲ್ಲಿ- ಬೆಳೆವಿಮೆ ಪಾಲಿಸಿ ವಿತರಣೆ ಅಭಿಯಾನ

Social Share

ಬೆಂಗಳೂರು,ಫೆ.26-ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ವ್ಯಾಪ್ತಿಯನ್ನು ಹೆಚ್ಚಿಸುವ ಜೊತೆಗೆ ಯೋಜನೆಯನಗನು ರೈತರ ಮನೆ ಬಾಗಿಲಿಗೆ ತಲುಪಿಸಲು , ನನ್ನ ಪಾಲಿಸಿ ನನ್ನ ಕೈಯಲ್ಲಿ ಎಂಬ ಬೆಳೆವಿಮೆ ಪಾಲಿಸಿ ವಿತರಣಾ ಅಭಿಯಾನ ಪ್ರಾರಂಭಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ನಗರದ ಜಿಕೆವಿಕೆಯ ಬಿ.ಹೆಚ್.ಎಸ್ ಕಾಲೇಜಿನ ಆಡಿಟೋರಿಯಂನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಾಕೃತಿಕ ವಿಕೋಪಗಳಿಂದ ಬೆಳೆಗಳಿಗೆ ವಿಮಾ ಭದ್ರತಾ ಕವಚ ಒದಗಿಸುವುದು ನಮ್ಮ ಸಂಕಲ್ಪವಾಗಿದೆ. ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಉಂಟಾದಾಗ ರೈತರ ನೆರವಿಗೆ ಬರುವ ಯೋಜನೆ ಇದಾಗಿದೆ ಎಂದರು.
ಹಿಂಗಾರು 2021-22ರ ಹಂಗಾಮಿನಲ್ಲಿ ನೋಂದಣಿ ಮಾಡಿದಂತಹ ರೈತರಿಗೆ ತಮ್ಮ ಪಾಲಿಸಿ ವಿವರವನ್ನು ಇನ್‍ಲ್ಯಾಂಡ್ ಲೆಟರ್ ನಮೂನೆಯಲ್ಲಿ ವಿತರಿಸುವ ಕಾರ್ಯಕ್ರಮ , ಇಎಸ್ ಈಗ ರಾಜ್ಯದ ಲಕ್ಷಾಂತರ ರೈತರು ನನ್ನ ಪಾಲಿಸಿ ನನ್ನ ಕೈಯಲಿ ಹೇಳಿಕೊಳ್ಳಬಹುದು. 2021ರ ಮುಂಗಾರು ಹಂಗಾಮಿನಲ್ಲಿ ರೂ .113.49 ಕೋಟಿಗಳ ಬೆಳೆ ವಿಮಾ ಪರಿಹಾರ ಮೊತ್ತವು ಸ್ಥಳೀಯ ಪ್ರಕೃತಿ ವಿಕೋಪಗಳಡಿ ಇತ್ಯರ್ಥವಾಗಿದೆ.
2016-17 ಹಾಗೂ 2017-18ರ ಮುಂಗಾರು , ಹಿಂಗಾರು ಮತ್ತು ಬೇಸಿಗೆ ಹಂಗಾಮಿನ ವಿಮಾ ಪರಿಹಾರ ಮೊತ್ತವು ರೈತರ ಬ್ಯಾಂಕ್ ಖಾತೆ ಹಾಗೂ ಆಧಾರ್ ಸಂಖ್ಯೆ ಲಭ್ಯವಿಲ್ಲದ ಕಾರಣ ತಿರಸ್ಕೃತಗೊಂಡ ರೂ . 100.24 ಕೋಟಿಗಳನ್ನು ಇಎಸ್‍ಸಿಆರ್‍ಒಡಬ್ಲ್ಯು ಖಾತೆಯ ಮೂಲಕ 1.27 ಲಕ್ಷ ಅರ್ಹ ರತ ಫಲಾನುಭವಿಗಳಿಗೆ ಇತ್ಯಾರ್ಥಪಡಿಸಲಾಗಿದೆ.
ಕಳೆದ ಬಾರಿ ನಡೆದ ಸಭೆಯಲ್ಲಿ ವಿಮಾ ಸಂಸ್ಥೆಯವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರ ಫಲವಾಗಿ ಒಂದೇ ತಿಂಗಳಿನಲ್ಲಿ , ರೂ .43,89 ಕೋಟಿ ಪರಿಹಾರ ಮೊತ್ತವನ್ನು 33,160 ರೈತರಿಗೆ ಇತ್ಯರ್ಥಪಡಿಸಿದ್ದಾರೆ.  NPCI Validation  ವೈಫಲ್ಯದಿಂದಾಗಿ ಹಲವಾರು ರೈತರಿಗೆ ಬೆಳೆವಿಮಾ ಪರಿಹಾರ ಮೊತ್ತ ಇತ್ಯರ್ಥವಾಗದ ಕಾರಣ ಎಲ್ಲಾ ರೈತರು ಕಡ್ಡಾಯವಾಗಿ ಆಧಾರನ್ನು ಬ್ಯಾಂಕ್ ಖಾತೆಗೆ ಜೋಡಣೆ ಮಾಡಿಕೊಳ್ಳಲೇಬೇಕೆಂದು ಮತ್ತೊಮ್ಮೆ ಸಚಿವರು ಪುನರುಚ್ಚರಿಸಿದರು.
ಕಾರ್ಯಕ್ರಮದಲ್ಲಿ ಜಿಕೆವಿಕೆ ಕುಲಪತಿ ರಾಜೇಂದ್ರ ಪ್ರಸಾದ್, ಕೃಷಿ ಇಲಾಖಾ ನಿರ್ದೇಶಕಿ ನಂದಿನಿಕುಮಾರಿ,ಕೃಷಿ ಆಯುಕ್ತ ಬ್ರಿಜೇಶ್ ಕುಮಾರ್ ದೀಕ್ಷಿತ್, ಅಕಾರಿಗಳಾದ ಶಿವರಾಜ್,ವೆಂಕಟರಮಣ ರೆಡ್ಡಿ ಉಪಸ್ಥಿತರಿದ್ದರು.

Articles You Might Like

Share This Article