ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಸ್ಥಗಿತ

ಮೈಸೂರು, ಸೆ.27- ಮಹಿಷ ದಸರಾ ಆಚರಣೆಗೆ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಈ ಕಾರ್ಯಕ್ರಮ ಸ್ಥಗಿತಗೊಂಡಿದೆ.
ಚಾಮುಂಡಿಬೆಟ್ಟದ ಮಹಿಷಾಸುರ ಪ್ರತಿಮೆ ಬಳಿ ಹಾಗೂ ನಗರದ ಟೌನ್‍ಹಾಲ್ ಬಳಿ ಮಹಿಷ ದಸರಾ ಆಚರಣಾ ಸಮಿತಿ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಮಹಿಷ ದಸರಾಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪುರಭವನ ಹಾಗೂ ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇಂದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 12ರವರೆಗೆ ನಿಷೇದಾಜ್ಞೆ ಇರಲಿದೆ. ಈ ಎರಡೂ ಕಡೆ ಸಭೆ, ಸಮಾರಂಭ, ಮೆರವಣಿಗೆ ನಡೆಸಬಾರದೆಂದು ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ.

ಹಾಗಾಗಿ ಇಂದು ನಡೆಯಬೇಕಿದ್ದ ಮಹಿಷ ದಸರಾ ಸ್ಥಗಿತಗೊಂಡಿದೆ. ಸಮಿತಿ ವತಿಯಿಂದ ಅಶೋಕಪುರಂನಲ್ಲಿ ಮಹಿಷ ದಸರಾಗೆ ಅವಕಾಶ ಕೊಡದಿರುವುದರನ್ನು ವಿರೋಧಿಸಿ ಪ್ರತಿಭಟನಾ ಮೆರವಣಿಗೆ ನಡೆಸಿ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.