Home ಇದೀಗ ಬಂದ ಸುದ್ದಿ ಮೈಸೂರು ವಿಮಾನ ನಿಲ್ದಾಣ ಮೇಲ್ದರ್ಜೆಗೆ

ಮೈಸೂರು ವಿಮಾನ ನಿಲ್ದಾಣ ಮೇಲ್ದರ್ಜೆಗೆ

0
ಮೈಸೂರು ವಿಮಾನ ನಿಲ್ದಾಣ ಮೇಲ್ದರ್ಜೆಗೆ

ಮೈಸೂರು, ಜೂ.8- ಮೈಸೂರು ಮತ್ತು ಕೊಡಗು ಕ್ಷೇತ್ರದ ನೂತನ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಬೆಂಗಳೂರಿನಿಂದ ನವದೆಹಲಿಗೆ ಪ್ರಯಾಣಿಸುವ ಮುನ್ನ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಮೈಸೂರಿನ ವಿಮಾನ ನಿಲ್ದಾಣ ಹಾಗೂ ವಿಮಾನಯಾನವನ್ನು ಮೇಲ್ದರ್ಜೆಗೆ ಏರಿಸುವ ಸಂಬಂಧ ಅಗತ್ಯವಿರುವ ಕಾರ್ಯಗಳನ್ನು ಕೈಗೊಳ್ಳಲು ಅಧಿಕಾರಿಗಳೊಂದಿಗೆ ಯದುವೀರ್‌ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು. ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಶೀಘ್ರ ಕಾರ್ಯರೂಪಕ್ಕೆ ತರುವ ಬಗ್ಗೆ ಯದುವೀರ್‌ ಭರವಸೆ ನೀಡಿದರು.