ಮೈಸೂರು, ಆ. 19- ಪಬ್ ನಲ್ಲಿ ಮದ್ಯ ಸೇವಿಸಿ ಗಲಾಟೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಸಿಸಿಬಿ ಇನ್‌್ಸಪೆಕ್ಟರ್ ಮೋಹನ್ ಕುಮಾರ್ ಅವರನ್ನು ಅಮಾನತು ಮಾಡಿ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಆದೇಶ ಹೊರಡಿಸಿದ್ದಾರೆ.
ಚಾಮುಂಡಿಬೆಟ್ಟದ ತಪ್ಪಲಿನ ಜೆಸಿ ನಗರದ ಪಬ್ ಒಂದಕ್ಕೆ ತೆರಳಿ ಕುಡಿದ ಮತ್ತಿನಲ್ಲಿ ಸಿಬ್ಬಂದಿಗಳ ಜೊತೆ ಜಗಳವಾಡಿದ್ದ ವಿಡಿಯೋ ವೈರಲ್ ಆಗಿತ್ತು. ಅವಾಚ್ಯ ಶಬ್ದಗಳನ್ನ ಬಳಸಿ ಆವಾಜ್ ಹಾಕಿದ್ದರು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಕಮಿಷನರ್ ಸೀಮಾ ಲಾಟ್ಕರ್ ರವರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಮೋಹನ್ ಕುಮಾರ್‌ರನ್ನು ಅಮಾನತು ಪಡಿಸಿ ಶಿಸ್ತು ಕ್ರಮ ಕೈಗೊಂಡಿದ್ದಾರೆ.