ಮೈಸೂರು : ರಾಜಕಾಲುವೆಯಲ್ಲಿ ಮೊಸಳೆ ಪತ್ತೆ, ಆತಂಕದಲ್ಲಿ ಸ್ಥಳೀಯರು

Social Share

ಮೈಸೂರು,ನ.15-ನಗರದ ಜೆಎಎಸ್‍ಎಸ್ ಆಸ್ಪತ್ರೆ ಹಿಂಭಾಗದಲ್ಲಿರುವ ಎಲೆ ತೋಟದ ರಾಜಕಾಲುವೆಯಲ್ಲಿ ಪದೇ ಪದೇ ಮೊಸಳೆ ಕಾಣಿಸಿಕೊಳ್ಳುತ್ತಿದ್ದು, ಭಾನುವಾರ ಕರುವೊಂದನ್ನು ಬಲಿ ತೆಗೆದುಕೊಂಡ ಜಾಗದ ಸಮೀಪದಲ್ಲಿಯೇ ಮತ್ತೊಂದು ಮೊಸಳೆ ಮತ್ತೆ ಕಾಣಿಸಿಕೊಂಡಿದೆ.

ಸ್ಥಳೀಯರ ಪ್ರಕಾರ ಭಾನುವಾರ ಕಾಣಿಸಿಕೊಂಡ ಮೊಸಳೆಗಿಂತ ಇದು ಆಕಾರದಲ್ಲಿ ಭಿನ್ನವಾಗಿದ್ದು, ಈ ಮೊಸಳೆಯೇ ಬೇರೆ ಎಂದು ಹೇಳುತ್ತಾರೆ. ಸೋಮವಾರ ಮಧ್ಯಾಹ್ನ ಮೊಸಳೆ ಮತ್ತೆ ಕಾಣಿಸಿಕೊಂಡಿದ್ದು, ಸ್ಥಳೀಯರು ನೋಡುತ್ತಿರುವಾಗಲೇ ಚರಂಡಿ ನೀರಿಗೆ ಹಾರಿದೆ.

ಕರುವನ್ನು ಬಲಿ ತೆಗೆದುಕೊಂಡ ಮೊಸಳೆ ಪಕ್ಕದ ಕೆರೆಯಲ್ಲಿತ್ತು. ಈ ಬಗ್ಗೆ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಆರ್‍ಎಫ್‍ಓ ಸುರೇಂದ್ರ, ಡಿಆರ್‍ಎಫ್‍ಓ ವೆಂಕಟಾಚಲ ಹಾಗೂ ಸಿಬ್ಬಂದಿಗಳು ಸೇರಿ ಒಟ್ಟು 6 ಜನ ಸಿಬ್ಬಂದಿಗಳು ಮೊಸಳೆಯನ್ನು ಹಿಡಿಯುವ ಕಾರ್ಯಾಚರಣೆ ಆರಂಭಿಸಿದ್ದರು.

ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಸೂರ್ಯ ಸಿಡಿದೇಳಬೇಕಿತ್ತು: ಜಾಫರ್

ಮೋಟಾರ್ ಬಳಸಿ ಕೆರೆಯ ನೀರನ್ನು ಹೊರಚೆಲ್ಲಿ ಮೊಸಳೆಯನ್ನು ಹಿಡಿಯುವ ಪ್ರಯತ್ನ ಮಾಡಲಾಗಿತ್ತು. ಆದರೆ, ನೀರು ಖಾಲಿ ಮಾಡುವಷ್ಟರಲ್ಲಿ ಸಂಜೆಯಾಗಿ ಕತ್ತಲಾವರಿಸಿತ್ತು. ಕಾರ್ಯಾಚರಣೆ ಕೈ ಬಿಟ್ಟ ಅಧಿಕಾರಿಗಳು ಬರಿಗೈಯಲ್ಲಿ ತೆರಳಿದ್ದರು.

ಚೀನಾದೊಂದಿಗೆ ಯಾವುದೇ ಶೀತಲ ಸಮರ ಇಲ್ಲ : ಬಿಡೆನ್

ಸೋಮವಾರ ಈ ಕೆರೆಗೆ ಸಮೀಪದಲ್ಲಿಯೇ ಚರಂಡಿ ನೀರಿನಿಂದ ಮೇಲೆ ಬಂದ ಮೊಸಳೆ ಬಹು ಹೊತ್ತಿನವೆರೆಗೂ ಮುರಿದು ಬಿದ್ದ ತೆಂಗಿನ ಮರವೊಂದರ ಮೇಲೆ ಮಲಗಿತ್ತು. ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡುವಷ್ಟರಲ್ಲಿ ಮೊಸಳೆ ಮತ್ತೆ ಚರಂಡಿ ನೀರು ಸೇರಿಕೊಂಡಿತ್ತು.

ಗುರುವಾರದಿಂದ 108 ಆಂಬ್ಯುಲೆನ್ಸ್ ಸೇವೆ ಸ್ಥಗಿತ..!?

ಎಲೆತೋಟದಲ್ಲಿ ಒಂದಕ್ಕಿಂತ ಹೆಚ್ಚು ಮೊಸಳೆಗಳಿವೆ. ನಾವು ಹಲವು ಬಾರಿ ಈ ಮೊಸಳೆಗಳನ್ನು ನೋಡಿದ್ದೇವೆ ಎಂದು ರಾಮಾನುಜ ರಸ್ತೆ ನಿವಾಸಿಗಳಾದ ಮಧುಕರ್, ಮರಿಸ್ವಾಮಿ ಮತ್ತು ಚಾಮರಾಜು ತಿಳಿಸಿದ್ದಾರೆ.

Articles You Might Like

Share This Article