ದಸರಾ ಪ್ರವಾಸಿಗರಿಗೆ ಏಕೀಕೃತ ಟಿಕೆಟ್ ವ್ಯವಸ್ಥೆ

Social Share

ಮೈಸೂರು,ಸೆ.19- ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ ವತಿಯಿಂದ ಏಕೀಕೃತ ಟಿಕೆಟ್ (ಕಾಂಬೋ ಟಿಕೆಟ್) ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.

ಏಕೀಕೃತ ಟಿಕೆಟ್ ಪಡೆಯುವುದರಿಂದ ಪ್ರವಾಸಿಗರು ಹಾಗೂ ಸಾರ್ವಜನಿಕರು 5 ಪ್ರವಾಸಿ ಸ್ಥಳಗಳಾದ ಮೈಸೂರು ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ, ರೈಲ್ವೆ ಮ್ಯೂಸಿಯಂ ಹಾಗೂ ಕೆಆರ್ ಎಸ್ ಬೃಂದಾವನಕ್ಕೆ ತೆರಳಬಹುದು.
ಪ್ರವಾಸಿಗರು ಈ ಏಕೀಕೃತ ಟಿಕೆಟ್ ಪಡೆಯುವುದರಿಂದ ಟಿಕೆಟ್‍ಗಾಗಿ ಸರದಿ ಸಾಲಿನಲ್ಲಿ ನಿಲ್ಲುವ ಅಗತ್ಯವಿರುವುದಿಲ್ಲ. ಒಂದೇ ಟಿಕೆಟ್‍ನಲ್ಲಿ 5 ಸ್ಥಳಗಳಲ್ಲಿ ಪ್ರವಾಸ ಮಾಡಬಹುದು.

ಇದನ್ನೂ ಓದಿ : ಆಟೋ ಚಾಲಕನಿಗೆ ಹೊಡೀತು 25 ಕೋಟಿ ರೂ. ಬಂಪರ್ ಲಾಟರಿ..!

ಏಕೀಕೃತ ಟಿಕೆಟ್‍ವ್ಯವಸ್ಥೆಯು ನಾಳೆಯಿಂದ ಆರಂಭಗೊಂಡು, ಅಕ್ಟೋಬರ್ 5ರ ವರೆಗೆ ಚಾಲ್ತಿಯಲ್ಲಿರುತ್ತದೆ. ಒಂದು ಟಿಕೆಟ್ ಬೆಲೆ 500 ರೂ.ಗಳಾಗಿದ್ದು, ಮಕ್ಕಳಿಗೆ ಟಿಕೆಟ್ ದರವನ್ನು 250 ರೂ.ಗಳಿಗೆ ನಿಗದಿಪಡಿಸಲಾಗಿದೆ.

ಏಕೀಕೃತ ಟಿಕೆಟ್‍ನನ್ನು ಪ್ರವಾಸಿ ಇಲಾಖೆಯ ವತಿಯಿಂದ ಮಾರಾಟ ಮಾಡಲಾಗುತ್ತಿದೆ. ಕೆಎಸ್‍ಟಿಡಿಇ ಹೋಟೆಲ್ ಹಾಗೂ ಟ್ರಾವೆಲ್ಸ್ ವಿಭಾಗದಲಿ, ಕೆಎಸ್‍ಆರ್‍ಟಿಸಿ ಸಬರ್ ಹಾಗೂ ನಗರ ಬಸ್ ನಿಲ್ದಾಣಗಳಲ್ಲಿ, ರೈಲ್ವೆ ನಿಲ್ದಾಣದ ಎರಡು ಕಡೆ, ಚಾಮುಂಡಿ ಬೆಟ್ಟ, ಮೃಗಾಲಯ, ಕೆಆರ್‍ಎಸ್, ಅರಮನೆ ಹಾಗೂ ಮೈಸೂರು ನಗರದ ಪ್ರಮುಖ ಹೋಟೆಲ್‍ಗಳಲ್ಲಿ ಟಿಕೆಟ್ ಲಭ್ಯವಿರಲಿದೆ. ಸಾರ್ವಜನಿಕರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Articles You Might Like

Share This Article