ಮೈಸೂರು,ಡಿ.2- ಟಿ.ನರಸೀಪುರದಲ್ಲಿ ಚಿರತೆ ದಾಳಿಯಿಂದ ಮೃತಪಟ್ಟ ಮೇಘನಾ ಅವರ ಕುಟುಂಬಕ್ಕೆ 7 ಲಕ್ಷ ರೂ. ಪರಿಹಾರದ ಜೊತೆಗೆ ಅವರ ಮನೆಯವರಿಗೆ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನೀಡಲಾಗುವುದು ಎಂದು ಮೈಸೂರು ವೃತ್ತ ಅರಣ್ಯಾಧಿಕಾರಿ ಮಾಲತಿ ಪ್ರಿಯ ತಿಳಿಸಿದ್ದಾರೆ.
ಅಲ್ಲದೆ ನರಭಕ್ಷಕ ಚಿರತೆಯನ್ನು ಕಂಡಲ್ಲಿ ಗುಂಡಿಕ್ಕಿ ಕೊಲ್ಲುವಂತೆ ಸರ್ಕಾರದಿಂದ ಆದೇಶವೂ ಸಿಕ್ಕಿರುವುದಾಗಿ ಅವರು ಹೇಳಿದ್ದಾರೆ. ಚಿರತೆ ದಾಳಿಯಿಂದ ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ ಗ್ರಾಮಸ್ಥರು ನಿನ್ನೆ ಮಧ್ಯರಾತ್ರಿ ತನಕ ಅರಸೀಪುರ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದ್ದರು.
ಈ ಮಾಹಿತಿ ಹಿನ್ನಲೆಯಲ್ಲಿ ಮಾಲತಿಯವರು ಸ್ಥಳಕ್ಕೆ ತೆರಳಿ ಪ್ರತಿಭಟನಾನಿರತರೊಂದಿಗೆ ಮಾತುಕತೆ ನಡೆಸಿದರು. ಮೃತ ಯುವತಿ ಅವರ ಕುಟುಂಬಕ್ಕೆ 7 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಕುಟುಂಬದ ಒಬ್ಬರಿಗೆ ಕೆಲಸ ನೀಡುತ್ತೇವೆ ಎಂಬುದನ್ನು ತಿಳಿಸಿದರು.
ಘೋಷಣೆ ಮಾಡಿರುವ ಅಭ್ಯರ್ಥಿಗಳ ಬದಲಾವಣೆ ಇಲ್ಲ : ಹೆಚ್‌ಡಿಕೆ
ಚಿರತೆ ಹಾವಳಿ ನಿಯಂತ್ರಿಸಲು ತಿ.ನರಸೀಪುರ ತಾಲ್ಲೂಕಿನಲ್ಲಿ 15 ತಜ್ಞರ ತಂಡ ನೇಮಕ ಮಾಡುತ್ತೇವೆ ಮತ್ತು ಚಿರತೆ ಕಂಡಲ್ಲಿ ಗುಂಡು ಹಾರಿಸಲು ಅನುಮತಿ ಸಿಕ್ಕಿದ್ದು, ಹಾವಳಿ ನಿಯಂತ್ರಿಸಲಾಗುವುದು ಎಂದರು.
ಅತ್ತಿಗೆ ಮೇಲಿನ ವ್ಯಾಮೋಹಕ್ಕೆ ಷಡ್ಕನನ್ನು ಕೊಂದು ಹೂತು ಹಾಕಿದ ಆರೋಪಿ
Mysore, leopard, ordered, shoot,