ಬಾಲಕಿ ಮೇಲೆ ಅತ್ಯಾಚಾರವೆಸಗಿದವನಿಗೆ 43 ವರ್ಷ ಶಿಕ್ಷೆ ವಿಧಿಸಿದ ಕೋರ್ಟ್

Social Share

ಮೈಸೂರು, ನ.23- ಬಾಲಕಿ ಮೇಲೆ ಅತ್ಯಾಚಾರವೆಸಗಿದ ಅಪರಾಧಿಗೆ ನಗರದ ಪೋಸ್ಕೋ ವಿಶೇಷ ನ್ಯಾಯಾಲಯ 43 ವರ್ಷಗಳ ಕಠಿಣ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಬಿಹಾರ ಮೂಲದ ನಾಜೀಮ್ ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದಾನೆ.

ಟಿ.ನರಸೀಪುರ ರಸ್ತೆಯ ತೋಟದ ಮನೆಯೊಂದರಲ್ಲಿ ಕಳೆದ 2021ರಲ್ಲಿ 10 ವರ್ಷದ ಬಾಲಕಿ ಮೇಲೆ ಈತ ಅತ್ಯಾಚಾರ ಎಸಗಿದ್ದ. ಈ ಕುರಿತು ಮೈಸೂರು ಗ್ರಾಮಾಂತರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿಯನ್ನು ಬಂಧಿಸಿದ ನಂತರ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು. ಅಂತಿಮವಾಗಿ ವಿಚಾರಣೆ ನಡೆದು ಆರೋಪ ಸಾಬೀತಾದ ಕಾರಣ ನ್ಯಾಯಾೀಧಿಶರಾದ ಶೈಮಾ ಕಮರೋಜ್ ಅವರು ಅಪರಾಧಿ ನಾಜೀಮ್‍ಗೆ 43 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪು ನೀಡಿದ್ದಾರೆ.

4 ಚೀನೀ ಪ್ರಜೆಗಳ ಹತ್ಯೆ : ಶಂಕಿತನ ಬಂಧನ

ಇದಲ್ಲದೆ, ನ್ಯಾಯಾಲಯ ಬಾಲಕಿಗೆ 7 ಲಕ್ಷ ರೂ. ಪರಿಹಾರ ನೀಡುವಂತೆಯೂ ಕೂಡ ಸೂಚಿಸಿದೆ. ಇನ್ಸ್‍ಪೆಕ್ಟರ್ ಕೆ.ಜೀವನ್ ಅವರು ತನಿಖಾಕಾಧಿರಿಯಾಗಿ ಕಾರ್ಯನಿರ್ವಹಿಸಿದ್ದರು. ಸಂತ್ರಸ್ತ ಬಾಲಕಿ ಪರ ಸರ್ಕಾರಿ ಅಭಿಯೋಜಕರಾದ ಕೆ.ಬಿ.ಜಯಂತಿ ವಾದ ಮಂಡಿಸಿದ್ದರು.

ಮಿಜೋರಾಂನಲ್ಲಿ ಭಾರಿ ಪ್ರಮಾಣದ ಸ್ಪೋಟಕ ವಶಕ್ಕೆ ಪಡೆದ ಎನ್‍ಐಎ

Mysore, Rape, 43 years, sentenced,

Articles You Might Like

Share This Article