ಮೈಸೂರು,ಜ.12- ಜಿಲ್ಲೆಯಲ್ಲಿ ಹೆಚ್ಚಿನ ಮಕ್ಕಳು ಕೊರೊನಾ ಸೋಂಕಿಗೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ನಗರ ಮತ್ತು ತಾಲೂಕಿನಲ್ಲಿ ಅಂಗನವಾಡಿಯಿಂದ 10ನೇ ತರಗತಿಯವರೆಗಿನ ಭೌತಿಕ ತರಗತಿಗಳನ್ನು ಇಂದಿನಿಂದ ಸ್ಥಗಿತಗೊಳಿಸಲು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶಿಸಿದ್ದಾರೆ.
ಈ ಅವಧಿಯಲ್ಲಿ ಆನ್‍ಲೈನ್ ತರಗತಿಗಳನ್ನು ನಡೆಸಲು ಸೂಚಿಸಿದ್ದಾರೆ. ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಒಟ್ಟು 138 ಮಕ್ಕಳು ಸೋಂಕಿತರಾಗಿದ್ದಾರೆ. ಮಂಗಳವಾರ 562 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,868ಕ್ಕೆ ಹೆಚ್ಚಿದೆ. ಇದೇ ರೀತಿ ಇನ್ನೂ ಹಲವು ಜಿಲ್ಲೆಗಳಲ್ಲಿ ಮುಚ್ಚಲು ಚಿಂತನೆ ನಡೆಸಲಾಗುತ್ತಿದೆ.
