ಬೆಂಗಳೂರು,ನ.27- ಅಭಿಮಾನಿಗಳ ಕೋರಿಕೆಯಂತೆ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ ಸ್ಮಾರಕವು ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ನಿರ್ಮಾಣವಾಗುತ್ತಿದ್ದು, ಶೀಘ್ರದಲ್ಲೇ ಉದ್ಘಾಟನೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಷ್ಣುವರ್ಧನ್ ಅವರ ಸ್ಮಾರಕದ ಕಾಮಗಾರಿಯನ್ನು ಆದಷ್ಟು ಬೇಗ ಮುಗಿಸಿ ಲೋಕಾರ್ಪಣೆ ಮಾಡಬೇಕೆಂಬುದು ಅಭಿಮಾನಿಗಳ ಒತ್ತಾಸೆಯಾಗಿದೆ. ಶೀಘ್ರದಲ್ಲೇ ಅವರ ಆಸೆಯನ್ನು ನೆರವೇರಿಸಲಾಗುವುದು ಎಂದು ಭರವಸೆ ನೀಡಿದರು.
ಸ್ಮಾರಕ ನಿರ್ಮಾಣ ವಿವಿಧ ಕಾರಣಗಳಿಂದ ವಿಳಂಬವಾಗಿತ್ತು. ಈಗ ಎಲ್ಲವೂ ಸರಿ ಹೋಗಿರುವುದರಿಂದ ಯಾವುದೇ ಸಮಸ್ಯೆ ಇಲ್ಲ. ಕುಟುಂಬದವರ ಅಪೇಕ್ಷೆಯಂತೆ ಕೆಲಸಗಳು ಭರದಿಂದ ಸಾಗಿದೆ ಎಂದರು.
ರಾಜಸ್ಥಾನ : ನೆರೆಮನೆಗೆ ನುಗ್ಗಿ ಮೂವರನ್ನು ಗುಂಡಿಕ್ಕಿ ಕೊಂದ ವ್ಯಕ್ತಿ
ವಿಷ್ಣುವರ್ಧನ್ ಕನ್ನಡ ನಾಡು ಕಂಡ ಶ್ರೇಷ್ಠ ನಟರಲ್ಲೊಬ್ಬರು. ನಾನು ಕೂಡ ಅವರ ಅನೇಕ ಚಿತ್ರಗಳನ್ನು ನೋಡಿದ್ದೇನೆ. ನನ್ನ ಅಚ್ಚುಮೆಚ್ಚಿನ ನಟರೂ ಕೂಡ. ಇನ್ನು ಬಹುಕಾಲ ಇರಬೇಕಿತ್ತು. ಆದರೆ ವಿಧಿಯಾಟ ಬೇರೆಯಾಗಿತ್ತೆಂದು ವಿಷಾದಿಸಿದರು.
ವಿಷ್ಣುವರ್ಧನ್ ಅವರ ಮನೆ ತುಂಬಾ ಸುಂದರವಾಗಿದೆ. ಮೈಸೂರಿನಲ್ಲಿ ವಿಷ್ಣು ಸ್ಮಾರಕದ ಕೆಲಸಗಳು ನಡೆಯುತ್ತಿವೆ. ಸದ್ಯದಲ್ಲೇ ವಿಷ್ಣು ಸ್ಮಾರಕದ ಉದ್ಘಾಟನೆ ಸಮಾರಂಭವಾಗುತ್ತದೆ ಎಂದು ಮತ್ತೊಮ್ಮೆ ಪುನರುಚ್ಚರಿಸಿದರು.
ವಿಷ್ಣು ನಮ್ಮೆಲ್ಲರಿಗೂ ಮಾದರಿ ವ್ಯಕ್ತಿತ್ವ. ಅವರ ಘನತೆಯನ್ನು ಎತ್ತಿಹಿಡಿಯುವ ಮ್ಯೂಸಿಯಂ ಮಾಡುತ್ತೇವೆ ಎಂದು ಹೇಳಿದರು.
ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ 100 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆಯನ್ನು ನಿರ್ಮಾಣ ಮಾಡಬೇಕೆಂದು ಕೆಲವು ಅಹೋರಾತ್ರಿ ಧರಣಿ ನಡೆಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಅಲ್ಲಿ ಆಸ್ಪತ್ರೆ ನಿರ್ಮಾಣ ಮಾಡಲು ಸಮಸ್ಯೆ ಇಲ್ಲ. ಜಾಗದ ಕೊರತೆ ಇರುವುದರಿಂದ ವಿಳಂಬವಾಗಿದೆ ಎಂದು ತಿಳಿಸಿದರು.
ರಾತ್ರೋರಾತ್ರಿ ಮಾಯವಾದ 2 ಗೋಪುರಗಳು, ಗುಂಬಜ್ ವಿವಾದಕ್ಕೆ ತೆರೆ
ಜಾಗದ ಲಭ್ಯತೆ ನೋಡಿಕೊಂಡು ವರದಿ ನೀಡಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ. ವರದಿ ಬಂದ ನಂತರ ಚರ್ಚಿಸಿ ಆಸ್ಪತ್ರೆ ನಿರ್ಮಾಣಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬೊಮ್ಮಾಯಿ ಆಶ್ವಾಸನೆ ನೀಡಿದರು.
ಮಲೆನಾಡು ಭಾಗದಲ್ಲಿ ಅಡಿಕೆ ಬೆಳೆಗೆ ಎಲೆಚುಕ್ಕಿ ರೋಗ ಬಂದಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ ಎಂದ ಅವರು, ಇದನ್ನು ನಿಯಂತ್ರಿಸಲು ಸರ್ಕಾರ ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಹೇಳಿದರು.
ಬೆಳೆ ನಷ್ಟಕ್ಕೊಳಗಾದವರಿಗೆ ಪರಿಹಾರ ನೀಡಲು 10 ಸಾವಿರ ಕೋಟಿ ಪ್ಯಾಕೇಜ್ ಘೋಷಿಸಿದ್ದೇವೆ. ಎನ್ಆರ್ಪುರ, ಕೊಪ್ಪ, ತೀರ್ಥಹಳ್ಳಿಗೆ ಭೇಟಿ ನೀಡಿದ ವೇಳೆ ಸ್ಥಳೀಯ ಜನಪ್ರತಿನಿಗಳಿಂದ ಮಾಹಿತಿ ಪಡೆದುಕೊಳ್ಳುವುದಾಗಿ ತಿಳಿಸಿದರು.
ಕ್ಷುಲ್ಲಕ ವಿಚಾರಕ್ಕೆ ಘರ್ಷಣೆ : ಚುನಾವಣೆ ಕರ್ತವ್ಯದಲ್ಲಿದ್ದ ಭದ್ರತಾ ಸಿಬ್ಬಂದಿ ಸಾವು
Mysore, Vishnuvardhan, Memorial, soon, CM Bommai,