ಬೆಂಗಳೂರು, ಫೆ.12-ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಬೆಂಗಳೂರಿನಿಂದ ಮೈಸೂರುವರೆಗಿನ ದಶಪಥ ರಾಷ್ಟ್ರೀಯ ಹೆದ್ದಾರಿಗೆ ಭೈರವೈಕ್ಯ ಡಾ. ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಹೆಸರನ್ನು ನಾಮಕರಣ ಮಾಡುವ ಕುರಿತಂತೆ ಚರ್ಚೆ ನಡೆಸಲು ಫೆ.14ರಂದು ಸಭೆ ಕರೆಯಲಾಗಿದೆ.
ಅಂದು ಸಂಜೆ 5.30ಕ್ಕೆ ವಿಜಯನಗರ ಆದಿಚುಂಚನಗಿರಿ ಶಾಖಾ ಮಠದಲ್ಲಿ ಒಕ್ಕಲಿಗ ಸಮಾಜದ ಪ್ರಮುಖರ ಸಭೆ ನಡೆಯಲಿದೆ. ಜತೆಗೆ ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬಿಜಿಎಸ್ ಆಸ್ಪತ್ರೆ ಎಂದು ನಾಮಕರಣ ಮಾಡುವ ಕುರಿತಂತೆಯೂ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದು ಸಮಿತಿಯ ಅಧ್ಯಕ್ಷ ಗಾ.ನಂ ಶ್ರೀಕಂಠಯ್ಯ ಮತ್ತು ಪ್ರಧಾನ ಸಂಚಾಲಕ ಆಡಿಟರ್ ನಾಗರಾಜ್ ಯಲಚವಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲೋಕ್ ಅದಾಲತ್ ನಲ್ಲಿ ಒಂದಾದ ವಿಚ್ಛೇದನಕ್ಕೆ ಮುಂದಾಗಿದ್ದ 14 ದಂಪತಿಗಳು
ದಶಪಥದ ರಾಷ್ಟ್ರೀಯ ಹೆದ್ದಾರಿಗೆ ಬಾಲಗಂಗಾಧರನಾಥ ಶ್ರೀಗಳ ಹೆಸರಿಡಬೇಕು. ಸ್ವಾಮೀಜಿ ಅವರು, ಶಿಕ್ಷಣ, ಆರೋಗ್ಯ, ಸಾಮಾಜಿಕ, ಧಾರ್ಮಿಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ್ದಾರೆ. ಆದಿಚುಂಚನಗಿರಿ ಮಠದ ಮೂಲಕ ನಾಡಿಗೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹೆದ್ದಾರಿಗೆ ಶ್ರೀಗಳ ಹೆಸರು ನಾಮಕರಣ ಮಾಡಬೇಕು ಎಂಬುದು ಬಹುಜನರ ಒತ್ತಾಯವಾಗಿದೆ ಎಂದು ಅವರು ಹೇಳಿದ್ದಾರೆ.
Mysuru, Bengaluru, Expressway, named, vokkaliga, community, meeting,