Friday, July 19, 2024
Homeರಾಜ್ಯಮೈಸೂರು ದಸರಾ : ಅ.6ರಿಂದ 13ರವರೆಗೆ ಯುವ ಸಂಭ್ರಮ

ಮೈಸೂರು ದಸರಾ : ಅ.6ರಿಂದ 13ರವರೆಗೆ ಯುವ ಸಂಭ್ರಮ

ಮೈಸೂರು, ಅ. 4- ಮೈಸೂರು ದಸರಾ ಅಂಗವಾಗಿ ಯುವ ಸಂಭ್ರಮ ಕಾರ್ಯಕ್ರಮ ಅ. 6ರಿಂದ 13ರವರೆಗೆ ನಡೆಯಲಿದೆ ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಟ್ಕರ್ ತಿಳಿಸಿದರು. ನಗರದ ಎಸ್ಪಿ ಕಚೇರಿಯಲ್ಲಿಂದು ಬೆಳಿಗ್ಗೆ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಯುವ ಸಂಭ್ರಮ ಕುರಿತ ಮಾಹಿತಿ ನೀಡಿದರು.

ಅ. 6ರಿಂದ 13ರವರೆಗೆ ಮೈಸೂರಿನ ಮಾನಸಗಂಗೋತ್ರಿಯ ಬಯಲು ರಂಗ ಮಂದಿರದಲ್ಲಿ ಯುವ ಸಂಭ್ರಮ ಕಾರ್ಯಕ್ರಮ ನಡೆಯಲಿದೆ ಎಂದು ಅವರು ತಿಳಿಸಿದರು. ಉದ್ಘಾಟನಾ ಸಮಾರಂಭ ಅ.6ರಂದು ಸಂಜೆ ನಡೆಯಲಿದ್ದು, ಈ ಸಮಾರಂಭವನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದವರು ಹೇಳಿದರು. ಉದ್ಘಾಟನೆಯ ದಿನದಂದು ಚಿತ್ರ ನಟ ವಶಿಷ್ಟ ಸಿಂಹ ಹಾಗೂ ಹರಿಪ್ರಿಯ ತಾರಾ ಮೆರಗು ನೀಡಲಿದ್ದಾರೆ ಎಂದವರು ತಿಳಿಸಿದರು.

ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಸಾಧಕ-ಬಾಧಕಗಳ ಕುರಿತು ಚರ್ಚೆ : ಪರಮೇಶ್ವರ್

ಈ ಸಂಭ್ರಮದಲ್ಲಿ ಪಾಲ್ಗೊಳ್ಳಲು ರಾಜ್ಯದ ವಿವಿಧಡೆಯಿಂದ 400ಕ್ಕೂ ಹೆಚ್ಚು ಅರ್ಜಿಗಳು ಬಂದಿದೆ. ರಾಜ್ಯದಲ್ಲಿನ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಉತ್ಸುಕರಾಗಿದ್ದಾರೆ ಎಂದವರು ತಿಳಿಸಿದರು.

ಸಿಕ್ಕಿಂನಲ್ಲಿ ಮೇಘಸ್ಪೋಟ, 23 ಸೇನಾ ಸಿಬ್ಬಂದಿ ನಾಪತ್ತೆ

ಈ ಬಾರಿ ಚಂದ್ರಯಾನ, ರಾಷ್ಟ್ರೀಯ ಭಾವೈಕ್ಯತೆ, ನಾಡು ನುಡಿಗಾಗಿ ಹೋರಾಡಿದವರು ಸೇರಿದಂತೆ 20 ವಿಷಯ ಕುರಿತು ನೃತ್ಯ ಪ್ರದರ್ಶನ ನೀಡಲು ಕಾಲೇಜು ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ ಎಂದವರು ತಿಳಿಸಿದರು. ಪ್ರತಿ ಕಾಲೇಜಿಗೆ 5 ನಿಮಿಷ ಕಾಲಾವಕಾಶವನ್ನು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಪ್ರತಿದಿನ ಸಂಜೆ 5ರಿಂದ ರಾತ್ರಿ 10 ಗಂಟೆಯವರೆಗೆ ಈ ಸಮಾರಂಭ ನಡೆಯಲಿದೆ ಎಂದವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

RELATED ARTICLES

Latest News