Friday, February 14, 2025
Homeಜಿಲ್ಲಾ ಸುದ್ದಿಗಳು | District Newsಮೈಸೂರು ಡಿಸಿ ದಿಢೀರ್‌ ವರ್ಗಾವಣೆ

ಮೈಸೂರು ಡಿಸಿ ದಿಢೀರ್‌ ವರ್ಗಾವಣೆ

ಮೈಸೂರು, ಜು. 5- ಮೈಸೂರು ಜಿಲ್ಲಾಧಿ ರಿ ಡಾ.ಕೆ.ವಿ.ರಾಜೇಂದ್ರ ಅವರನ್ನು ಡಿಢೀರ್‌ ವರ್ಗಾವಣೆ ಮಾಡಲಾಗಿದೆ. ಡಾ.ಕೆ.ವಿ.ರಾಜೇಂದ್ರ ಅವರಿಗೆ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಾಗಿ ಅಧಿ ಕಾರ ನೀಡಲಾಗಿದೆ.

ಇದೀಗ ರಾಜೇಂದ್ರ ಅವರ ವರ್ಗಾವಣೆ ಹಿನ್ನೆಲೆಯಲ್ಲಿ ಹಲವು ಅನುಮಾನ ಮೂಡಿದೆ. ಮೈಸೂರಿನ ಮುಡಾದಲ್ಲಿ ನಡೆದಿರುವ ಅಕ್ರಮ ಹಿನ್ನೆಲೆಯಲ್ಲಿ ರಾಜೇಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿಗೆ 50:50 ಅನುಪಾತದಲ್ಲಿ ಸೈಟು ಹಂಚಿಕೆ ಮಾಡಲಾಗಿದೆ ಎಂಬ ಹಗರಣದ ಹಿನ್ನೆಲೆಯಲ್ಲಿ ರಾಜೇಂದ್ರ ಅವರನ್ನು ಬೇರೆಡೆಗೆ ವರ್ಗಾಯಿಸಲಾಗಿದೆ ಎಂದು ಹೇಳಲಾಗುತ್ತಿದೆ.

ನೂತನ ಡಿಸಿ ಲಕ್ಷ್ಮೀಕಾಂತರೆಡ್ಡಿ: ಕೆ.ವಿ.ರಾಜೇಂದ್ರ ಅವರ ಸ್ಥಾನಕ್ಕೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಲಕ್ಷ್ಮೀಕಾಂತ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ಪ್ರಸ್ತುತ ಕರ್ನಾಟಕ ಅರ್ಬನ್‌ ಇನ್ಫಾಸ್ಟ್ರಕ್ಚರ್‌ ಅಂಡ್‌ ಫೈನಾನ್ಸ್ ಕಾರ್ಪೊರೇಷನ್‌ನಲ್ಲಿ ಮ್ಯಾನೇಜಿಂಗ್‌ ಡೈರೆಕ್ಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಲಕ್ಷ್ಮೀಕಾಂತ ರೆಡ್ಡಿ ಅವರನ್ನು ಮೈಸೂರು ಜಿಲ್ಲಾಧಿ ಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

RELATED ARTICLES

Latest News