ಅ.27ಕ್ಕೆ ಪತ್ರಿಕಾ ರಂಗದ ಭೀಷ್ಮನ ಸ್ವರಚಿತ ‘ನಾನು ಹಿಂದೂ ರಾಮಯ್ಯ’ ಕೃತಿ ಲೋಕಾರ್ಪಣೆ

Social Share

ಬೆಂಗಳೂರು,ಅ.25- ಅಭಿಮಾನಿ ಪ್ರಕಾಶನ ಹಾಗೂ ಕರ್ನಾಟಕ ಗಾಂ ಸ್ಮಾರಕ ನಿ ವತಿಯಿಂದ ಅ.27ರಂದು ಗಾಂಭವನದ ಮಹಾದೇವ ದೇಸಾಯಿ ಸಭಾಂಗಣದಲ್ಲಿನಾನು ಹಿಂದೂ ರಾಮಯ್ಯ’ ಕೃತಿ ಲೋಕಾರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಹಿರಿಯ ಪತ್ರಕರ್ತರಾದ ಪಿ.ರಾಮಯ್ಯ ಅವರು ತಮ್ಮ 60 ವರ್ಷಗಳ ಸುದೀರ್ಘ ಅನುಭವದ ಕಥನವನ್ನು `ನಾನು ಹಿಂದೂ ರಾಮಯ್ಯ’ ಎಂಬ ಕೃತಿಯಲ್ಲಿ ಬರೆದಿದ್ದಾರೆ. ಅಂದು ಬೆಳಗ್ಗೆ 10.30ಕ್ಕೆ ಆರಂಭವಾಗುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೃತಿ ಲೋಕಾರ್ಪಣೆ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾಡೋಜ ಡಾ.ವೂಡೇ ಪಿ.ಕೃಷ್ಣ ವಹಿಸಲಿದ್ದು, ಹಿರಿಯ ಪತ್ರಕರ್ತ, ವಿಧಾನಪರಿಷತ್ ಮಾಜಿ ಸದಸ್ಯ ಪಿ.ರಾಮಯ್ಯ ಅವರ ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಹುಣಸವಾಡಿ ರಾಜನ್ ಕೃತಿ ಕುರಿತು ಮಾತನಾಡಲಿದ್ದಾರೆ.

ಅಭಿಮಾನಿ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಟಿ.ವೆಂಕಟೇಶ್ ಅವರು ಪ್ರಾಸ್ತವಿಕ ನುಡಿಗಳನ್ನಾಡಲಿದ್ದಾರೆ.
ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಬೆಂಗಳೂರು ಪ್ರೆಸ್‍ಕ್ಲಬ್ ಅಧ್ಯಕ್ಷ ಶ್ರೀಧರ್ ಆರ್. ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

Articles You Might Like

Share This Article