ನಾಗ್ಪುರ, ಮಾ. 22: ಈ ವಾರದ ಆರಂಭದಲ್ಲಿ ನಾಗ್ಪುರದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕನಿಷ್ಠ 14 ಜನರನ್ನು ಬಂಧಿಸಲಾಗಿದ್ದು, ಒಟ್ಟು ಬಂಧಿತರ ಸಂಖ್ಯೆ 105 ಕ್ಕೆ ಏರಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, 10 ಬಾಲಾಪರಾಧಿಗಳು ಸೇರಿದಂತೆ 14 ಜನರನ್ನು ನಿನ್ನೆ ಬಂಧಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇನ್ನೂ ಮೂರು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿರುವ ಮೊಘಲ್ ಚಕ್ರವರ್ತಿ ಔರಂಗಜೇಬ್ ಅವರ ಸಮಾಧಿಯನ್ನು ತೆಗೆದುಹಾಕುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್
ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪವಿತ್ರ ಶಾಸನಗಳನ್ನು ಹೊಂದಿರುವ ಚಾದರ್ ಅನ್ನು ಸುಟ್ಟುಹಾಕಲಾಗಿದೆ ಎಂಬ ವದಂತಿಗಳ ಹಿನ್ನೆಲೆಯಲ್ಲಿ
ಮಾರ್ಚ್ 17 ರಂದು ನಾಗುರದ ಹಲವಾರು ಭಾಗಗಳಲ್ಲಿ ದೊಡ್ಡ ಪ್ರಮಾಣದ ಕಲ್ಲು ತೂರಾಟ ಮತ್ತು ಅಗ್ನಿಸ್ಪರ್ಶ ವರದಿಯಾಗಿತ್ತು.
ಗಲಭೆಗೆ ಸಂಬಂಧಿಸಿದಂತೆ ನಗರದ ವಿವಿಧ ಭಾಗಗಳಿಂದ ಹದಿನಾಲ್ಕು ಆರೋಪಿಗಳನ್ನು ಬಂಧಿಸಲಾಗಿದೆ. ಗಲಭೆಗೆ ಸಂಬಂಧಿಸಿದಂತೆ ಇನ್ನೂ ಮೂರು ಎಫ್‌ಐಆರ್ ಗಳನ್ನು ದಾಖಲಿಸಲಾಗಿದೆ ಎಂದು ನಾಗುರ ಪೊಲೀಸ್ ಆಯುಕ್ತ ರವೀಂದರ್ ಕುಮಾರ್ ಸಿಂಘಾಲ್
ತಿಳಿಸಿದ್ದಾರೆ.
ನಗರದ ಕೆಲವು ಭಾಗಗಳಿಂದ ಕರ್ಮ್ಯೂ ತೆಗೆದುಹಾಕುವ ನಿರ್ಧಾರವನ್ನು ಉನ್ನತ ಮಟ್ಟದ ಮರುಪರಿಶೀಲನೆಯ ನಂತರ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.