ಬೆಂಗಳೂರು,ಡಿ.15- ತಾಂತ್ರಿಕ ಸಮಸ್ಯೆಯಿಂದ ಸ್ಥಗಿತಗೊಂಡಿದ್ದ ಹಸಿರು ಮೆಟ್ರೋ ಸಂಚಾರ 32 ನಿಮಿಷಗಳ ನಂತರ ಪುನರಾರಂಭಗೊಂಡಿದೆ. ರೈಲು ಹಳಿಯಲ್ಲಿ ಕಾಣಿಸಿಕೊಂಡ ತಾಂತ್ರಿಕ ಸಮಸ್ಯೆಯಿಂದ ಮೆಟ್ರೋ ರೈಲು ಅರ್ಧ ದಾರಿಯಲ್ಲೇ ಕೆಟ್ಟು ನಿಂತ ಪರಿಣಾಮ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು. 32 ನಿಮಿಷಗಳ ಬಳಿಕ ಮೆಟ್ರೋ ಸೇವೆ ಪುನರಾರಂಭ ಮಾಡಲಾಗಿದೆ.
ಪೀಣ್ಯ ಮೆಟ್ರೋ ನಿಲ್ದಾಣದಲ್ಲಿ ಕೆಟ್ಟು ನಿಂತ ನಮ್ಮ ಮೆಟ್ರೋ ರೈಲಿನಿಂದಾಗಿ ಪ್ರಯಾಣಿಕರು ಪರದಾಡುವಂತಾಗಿತ್ತು. ನಾಗಸಂದ್ರದಿಂದ ಯಶವಂತಪುರದ ಕಡೆ ಸಂಚರಿಸುವ ರೈಲು ಮಾರ್ಗದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಬೆಳಿಗ್ಗೆ 10.18ಕ್ಕೆ ಮೆಟ್ರೋ ರೈಲು ಸಂಚಾರ ಸ್ಥಗಿತಗೊಳಿಸಲಾಗಿತ್ತು.
ಹೆಚ್ಚುತ್ತಿರುವ ಹೃದಯ ಸಂಬಂಧಿ ಕಾಯಿಲೆಗಳು, ಆತಂಕ ವ್ಯಕ್ತಪಡಿಸಿದ ವೈದ್ಯರು
ತಕ್ಷಣ ಸ್ಥಳಕ್ಕೆ ಆಗಮಿಸಿದ ತಜ್ಞರು ಆಗಿರುವುದು ಗಂಭೀರ ಸಮಸ್ಯೆ ಅಲ್ಲ ಅದಷ್ಟು ಬೇಗ ಸಮಸ್ಯೆ ಬಗೆಹರಿಸುವ ಭರವಸೆ ನೀಡಿ 10.50ಕ್ಕೆ ತಮ್ಮ ಕಾರ್ಯ ಮುಗಿಸಿದ ಹಿನ್ನೆಲೆಯಲ್ಲಿ ಮತ್ತೆ ಮೆಟ್ರೋ ರೈಲು ಸಂಚಾರ ಆರಂಭಿಸಲಾಗಿದೆ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.