ಬೆಂಗಳೂರು, ಜೂ.19– ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಗಳಲ್ಲೂ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಸ್ಥಳಾವಕಾಶ ಕಲ್ಪಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಸೇರಿದಂತೆ ವಿವಿಧೆಡೆ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗುವುದು. ಮೊದಲ ಆದ್ಯತೆ ನಮ ನಂದಿನಿ ಉತ್ಪನ್ನಗಳಿಗೆ ಕೊಡಬೇಕು ಎಂದರು.
ಮೆಟ್ರೋ ನಿಲ್ದಾಣಗಳಲ್ಲಿ ಅಮೂಲ್ ಮಳಿಗೆ ಪ್ರಾರಂಭ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಅವರು, ಮೊದಲು ನಂದಿನಿ ಮಳಿಗೆಗಳಿಗೆ ಅವಕಾಶ ಕೊಟ್ಟು ಆ ನಂತರ ಅಮೂಲ್‌ಗೆ ನೀಡಬೇಕಿತ್ತು. ಇನ್ನು ಮುಂದೆ ಯಾವುದೇ ರೈಲು ನಿಲ್ದಾಣಗಳಿರಲಿ ಮೊದಲು ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಅವರು ಹೇಳಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, 8-9 ಕಡೆ ನಂದಿನಿ ಮಳಿಗೆಗೆ ಅವಕಾಶ ಕೊಡುತ್ತೇವೆ ಎಂದಿದ್ದರು. ಬೆಂಗಳೂರಿನ ಉಸ್ತುವಾರಿ ಸಚಿವರು ಅವರೇ ಇದ್ದಾರೆ. ಅಮೂಲ್‌ಗೆ ಅವಕಾಶ ಮಾಡಿಕೊಟ್ಟಿರುವುದನ್ನು ಮುಖ್ಯಮಂತ್ರಿ ಅವರು ಗಮನಿಸುತ್ತಿದ್ದಾರೆ ಎಂದು ಹೇಳಿದರು.
ಈ ಬಾರಿ ಮಾವಿನ ಫಸಲು ಹೆಚ್ಚಾದ ಹಿನ್ನೆಲೆಯಲ್ಲಿ ಮಾವಿನ ಹಣ್ಣಿನ ಬೆಲೆ ಕಡಿಮೆಯಾಗಿದೆ.
ಹಾಪ್‌ಕಾಮ್ಸೌನಲ್ಲಿ ಉತ್ತಮ ಬೆಲೆಯಿತ್ತು. ಫಸಲು ಹೆಚ್ಚಾದರಿಂದ ಬೆಲೆ ಕುಸಿತವಾಗಿದೆ. ಕೋಲಾರ ಜಿಲ್ಲೆಯ ಮಾವಿನಹಣ್ಣು ನೆರೆಯ ಆಂಧ್ರಪ್ರದೇಶಕ್ಕೆ ಹೋಗುತ್ತಿತ್ತು. ಆಂಧ್ರದವರು ನಮ ರಾಜ್ಯದ ಮಾವಿನ ಹಣ್ಣಿಗೆ ನಿರ್ಬಂಧ ಏರಿರುವುದರಿಂದ ನಷ್ಟವಾಗಿದೆ. ಕಳೆದ ಸಂಪುಟ ಸಭೆಯಲ್ಲೂ ಈ ವಿಚಾರದ ಬಗ್ಗೆ ಚರ್ಚೆಯಾಗಿತ್ತು. ಈ ಸಂಬಂಧ ನಾನು ಸರ್ಕಾರದ ಗಮನ ಸೆಳೆಯುತ್ತೇನೆ ಎಂದು ತಿಳಿಸಿದರು.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-07-2025)
- ಬೆಂಗಳೂರಲ್ಲಿ ಇಂದು ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರ ಸಾವು
- ಶಾಲೆಗಳಿಗೆ ಬಾಂಬ್ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ : ಗೃಹಸಚಿವ ಪರಮೇಶ್ವರ
- ನೈರುತ್ಯ ಮುಂಗಾರು ಚೇತರಿಕೆ, ರಾಜ್ಯದ ಹಲವೆಡೆ ಮಳೆ
- 20 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ, ಬೆಚ್ಚಿ ಬಿದ್ದ ದೆಹಲಿ