ಬೆಂಗಳೂರು, ಡಿ.18- ಕುಂಚಿಟಿಗ ಒಕ್ಕಲಿಗ ಸಮುದಾಯಕ್ಕೆ ಕೇಂದ್ರ ಸರ್ಕಾರದಲ್ಲಿ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲು ಸೌಲಭ್ಯ ಕಲ್ಪಿಸುವ ಕುರಿತು ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಮಹಾ ಸ್ವಾಮೀಜಿ ಅವರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.
ಕುಂಚಿಟಿಗ ಸಮುದಾಯಕ್ಕೆ ಒಬಿಸಿ ಮೀಸಲು ಸೌಲಭ್ಯ ಕಲ್ಪಿಸುವ ಕುರಿತಂತೆ ಶ್ರೀಗಳು ಈಗಾಗಲೇ ನನ್ನೊಂದಿಗೆ ಚರ್ಚೆ ನಡೆಸಿ ಸಲಹೆ ಮಾಡಿದ್ದರು. ಅವರ ಸಲಹೆಯಿಂದ ಪ್ರೇರೇಪಿತವಾಗಿ ದೆಹಲಿಯ ಸಂಸತ್ ಭವನದಲ್ಲಿ ಇತ್ತೀಚೆಗಿನ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಕುಂಚಿಟಿಗ ಒಕ್ಕಲಿಗ ಸಮುದಾಯಕ್ಕೆ ಒಬಿಸಿ ಮೀಸಲು ಸೌಲಭ್ಯ ನೀಡುವಂತೆ ಒತ್ತಾಯಿಸಿರುವುದಾಗಿ ಗೌಡರು ತಿಳಿಸಿದ್ದಾರೆ.
ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧ, ಯಾವುದೇ ಸಂದರ್ಭದಲ್ಲಿ ಪ್ರಕಟ ಸಾಧ್ಯತೆ
ಈ ಸಂಬಂಧ ಟ್ವೀಟ್ ಮಾಡಿರುವ ಗೌಡರು, ಪ್ರಧಾನಿ ಅವರೊಂದಿಗಿನ ಭೇಟಿಯ ಕುರಿತು ನನ್ನ ಸ್ವಗೃಹದಲ್ಲಿ ಸಾಮೀಜಿ ಅವರೊಂದಿಗೆ ಸಮಾಲೋಚನೆ ನಡೆಸಿರುವುದಾಗಿ ಹೇಳಿದ್ದಾರೆ. ಪ್ರಧಾನಿ ಅವರೊಂದಿಗಿನ ಯಶಸ್ವಿ ಮಾತುಕಥೆಯ ವಿಚಾರವನ್ನು ಶ್ರೀಗಳೊಂದಿಗೆ ಹಂಚಿಕೊಳ್ಳಲಾಯಿತು.
ಪ್ರಧಾನಿ ಭೇಟಿ ಮಾಡಿ ಒಬಿಸಿ ಮೀಸಲಾತಿ ವಿಚಾರ ಪ್ರಸ್ತಾಪ ಮಾಡಿರುವುದಕ್ಕೆ ಶ್ರೀಗಳು ಶ್ಲಾಘನೆ ಮಾಡಿದರು. ಅವರ ವ್ಯಕ್ತಪಡಿಸಿದ ಶ್ಲಾಘನೆಗೆ ನಾನು ಆಭಾರಿಯಾಗಿದ್ದೇನೆ ಎಂದಿದ್ದಾರೆ.