Thursday, May 2, 2024
Homeರಾಜ್ಯಒಕ್ಕೂಟ ವ್ಯವಸ್ಥೆಗೆ ಮೋದಿ ಅಪಾಯಕಾರಿ : ಸಿದ್ದು

ಒಕ್ಕೂಟ ವ್ಯವಸ್ಥೆಗೆ ಮೋದಿ ಅಪಾಯಕಾರಿ : ಸಿದ್ದು

ಬೆಂಗಳೂರು,ಫೆ.21-ನರೇಂದ್ರಮೋದಿ ಅವರು ಒಕ್ಕೂಟ ವ್ಯವಸ್ಥೆಗೆ ಅಪಾಯಕಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ವಿಧಾನಪರಿಷತ್‍ನಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಉತ್ತರ ನೀಡುವಾಗ, ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ವಿವರಿಸುವಾಗ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಬಿಸಿ ಬಿಸಿ ವಾಗ್ವಾದ ನಡೆಯಿತು.

ಕೇಂದ್ರದಲ್ಲಿ ಯುಪಿಎ ಸರ್ಕಾರ ಇದ್ದಾಗ ನಡೆದಿದ್ದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮುಖ್ಯಮಂತ್ರಿ ಆಗಿದ್ದ ಮೋದಿಯವರು, ಯುಪಿಎ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಬೆದರಿಕೆ ಎಂದು ಹೇಳಿದ್ದ ಮಾತನ್ನು ಮುಖ್ಯಮಂತ್ರಿಗಳು ಉಲ್ಲೇಖಿಸಿದರು. ಮೋದಿ ಅವರು ಪ್ರಧಾನ ಮಂತ್ರಿ ಆಗಿದ್ದಾಗ, ರಾಜ್ಯಗಳು ಕೇಂದ್ರದ ಮುಂದೆ ಭಿಕ್ಷುಕರಲ್ಲ. ಗುಜರಾತ್ ರಾಜ್ಯದಿಂದ ಸಂಗ್ರಹ ಆಗುವ ತೆರಿಗೆಯಲ್ಲಿ ಶೇ50 ರಷ್ಟು ವಾಪಸ್ ಕೊಡಿ ಎಂದು ಕೇಂದ್ರಕ್ಕೆ ಕೇಳಿದ್ದರು.

ಗುಜರಾತ್ ರಾಜ್ಯದ ತೆರಿಗೆಯನ್ನು ನಾವು ಕೇಂದ್ರಕ್ಕೆ ಕೊಡುವುದಿಲ್ಲ ಎನ್ನುವ ಮಾತನ್ನೂ ಮೋದಿ ಅವರು ಆಡಿದ್ದರು. ಆದರೆ ಈಗ ಅದೇ ಮೋದಿ ಅವರು ಪ್ರಧಾನಿ ಆಗಿರುವಾಗ, ಕರ್ನಾಟಕ ರಾಜ್ಯಕ್ಕೆ ವಾಪಸ್ ಕೊಡುತ್ತಿರುವುದು ಶೇ.12-13ರಷ್ಟು ಮಾತ್ರ. ಮೋದಿ ಆಗೊಂದು ಮಾತು ಈಗೊಂದು ರೀತಿ ಮಾತನಾಡಿದ್ದಾರೆ. ಇದನ್ನು ಪ್ರಸ್ತಾಪಿಸಿದರೆ ನಿಮಗೇಕೆ ಸಿಟ್ಟು ಎಂದರು.

ನಾವು ಕೊಡುವ ಪ್ರತಿ 100 ರೂಪಾಯಿಗೆ ಕೇವಲ 12 ರೂ. ವಾಪಸ್ ಕೊಟ್ಟರೆ ರಾಜ್ಯದ ಅಭಿವೃದ್ಧಿ ಆಗಲು ಹೇಗೆ ಸಾಧ್ಯ? ಇಷ್ಟು ಕಡಿಮೆ ಪಾಲು ನಮಗೆ ಕೊಟ್ಟರೆ ರಾಜ್ಯದ ಶೂದ್ರರು, ದಲಿತರು, ಆದಿವಾಸಿಗಳು, ದುಡಿಯುವವರು, ಶ್ರಮಿಕರು, ಯುವಕರ, ಮಹಿಳೆಯರ ಅಭಿವೃದ್ಧಿ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. ಕೇಂದ್ರದಿಂದ ರಾಜ್ಯಕ್ಕೆ ಬರುತ್ತಿರುವ ಹಣದ ಪಾಲಿನಲ್ಲಿ ಅನ್ಯಾಯವಾದುದು. 2018-19ರಲ್ಲಿ ಕೇಂದ್ರ ಬಜೆಟ್ ಗಾತ್ರ 24,44,213 ಕೋಟಿ ಇತ್ತು.

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ : ಕಾಂಗ್ರೆಸ್ ಸರ್ಕಾರದ ಮತ್ತೊಂದು ಎಡವಟ್ಟು

ಅಂದು ರಾಜ್ಯಕ್ಕೆ 51,000 ಕೋಟಿ ಮಾತ್ರ ಬಂತು. 2020-21 ಸಾಲಿನಲ್ಲಿ ಕೇಂದ್ರದ ಬಜೆಟ್ ಗಾತ್ರ 30,42,243 ಕೋಟಿ ಇದ್ದರೆ ನಮಗೆ ಬಂದಿದ್ದು 31,734ಕೋಟಿ ರೂ., 2021-22 ರಲ್ಲಿ 34,83,236 ಕೋಟಿ ಗಾತ್ರದ ಬಜೆಟ್ ಗೆ , ರಾಜ್ಯಕ್ಕೆ 48,589 ಕೋಟಿ ಬಂತು. 2022-23ರಲ್ಲಿ ಕೇಂದ್ರದ ಬಜೆಟ್ 41,81,232 ಕೋಟಿ , ರಾಜ್ಯಕ್ಕೆ 53510 ಕೋಟಿ ಮಾತ್ರ ಬಂತು. 2023-24ರಲ್ಲಿ 45,03,007 ಕೋಟಿ ಕೇಂದ್ರದ ಬಜೆಟ್ ಗಾತ್ರ. ರಾಜ್ಯಕ್ಕೆ ಬಂದಿದ್ದು 50,257 ಕೋಟಿ ಮಾತ್ರ. 2024-25ರಲ್ಲಿ ರಾಜ್ಯಕ್ಕೆ 59,785 ಕೋಟಿ ಬರುತ್ತದೆ ಎಂದು ರಾಜ್ಯಕ್ಕೆ ಆಗುತ್ಯಲೇ ಇರುವ ಅನ್ಯಾಯದ ಅಂಕಿ ಅಂಶಗಳನ್ನು ಬಿಚ್ಚಿಟ್ಟರು.

ಈ ರೀತಿ ಬಜೆಟ್ ಗಾತ್ರ ದೊಡ್ಡದಾದರೂ, ನಮಗೆ ಬರುತ್ತಿರುವ ಪಾಲು ಕಡಿಮೆಯಾಗುತ್ತಿದೆ. ಪ್ರಧಾನಿ ಅವರು ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸುತ್ತಾ ರಾಜ್ಯದ ತೆರಿಗೆ ಪ್ರತಿಭಟನೆಯನ್ನು ಗುರಿಯಾಗಿಸಿಕೊಂಡು ದೇಶದ ಏಕತೆಗೆ ಅಪಾಯವೊಡ್ಡುತ್ತದೆ ಎಂದಿದ್ದರು. ಅದೇ ಪ್ರಧಾನಿಯವರು ಗುಜರಾತಿನ ಸಿಎಂ ಆಗಿದ್ದಾಗ 2012ರಲ್ಲಿ ಗುಜರಾತಿಗೆ ಬರುತ್ತಿರುವ ಆರ್ಥಿಕ ಪಾಲನ್ನು ವಿಧಿರೋಸಿದ್ದರು.

ಐಜೂರು ಪಿಎಸ್‍ಐ ಅಮಾನತು, ತನಿಖೆಗೆ ಆದೇಶ : ಗೃಹ ಸಚಿವ ಪರಮೇಶ್ವರ

ಗುಜರಾತ್ ರಾಜ್ಯ ನಾವು ಭಿಕ್ಷುಕ ರಾಜ್ಯವೇ, ನಾವು ಭಿಕ್ಷುಕರೆ, ನಾವು ಕೇಂದ್ರದ ಕರುಣೆಯ ಮೇಲೆ ಬದುಕಬೇಕೇ ಎಂದಿದ್ದರು. ಅಂದಿನ ಕೇಂದ್ರಕ್ಕೆ ಗುಜರಾತಿನಿಂದ ತೆರಿಗೆ ತೆಗೆದುಕೊಳ್ಳಬೇಡಿ, ಅದನ್ನು ನಾವೇ ಬಳಸಿಕೊಳ್ಳುತ್ತೇವೆ ಎಂದು ಮೋದಿ ಅಂದಿದ್ದರು. ಇದು ಸಂವಿಧಾನ, ಒಕ್ಕೂಟ ವ್ಯವಸ್ಥೆಗೆ ವಿರೋಧವಲ್ಲವೇ ಎಂದು ಅಂದಿನ ಮೋದಿಯವರ ಮಾತನ್ನೇ ಉಲ್ಲೇಖಿಸಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

RELATED ARTICLES

Latest News