ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಸಮಾವೇಶಕ್ಕೆ ಬಿಬಿಎಂಪಿ ನೀಡಿದ್ದ ಅನುಮತಿ ರದ್ದು

Social Share

ಬೆಂಗಳೂರು,ಜ.13-ಕಾಂಗ್ರೆಸ್ ಪಾದಯಾತ್ರೆ ಬೆಂಗಳೂರಿಗೆ ಆಗಮಿಸಲು ಹಾಗೂ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಬೃಹತ್ ಸಮಾವೇಶಕ್ಕೆ ನೀಡಲಾಗಿದ್ದ ಅನುಮತಿಯನ್ನು ಬಿಬಿಎಂಪಿ ರದ್ದುಗೊಳಿಸಿದೆ. ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆಗೆ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿ ಕೂಡಲೆ ಯಾತ್ರೆ ತಡೆಹಿಡಿಯಲು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚನೆ ನೀಡಿತ್ತು.
ಸರ್ಕಾರದ ಆದೇಶದ ಮೇರೆಗೆ ಬಿಬಿಎಂಪಿ ಅಕಾರಿಗಳು ಪಾದಯಾತ್ರೆ ಬೆಂಗಳೂರು ಪ್ರವೇಶಿಸಲು ಹಾಗೂ ನ್ಯಾಶನಲ್ ಕಾಲೇಜ್ ಮೈದಾನದಲ್ಲಿ ಹಮ್ಮಿಕೊಂಡಿದ್ದ ಬೃಹತ್ ರ್ಯಾಲಿಗೆ ನೀಡಿದ್ದ ಅನುಮತಿಯನ್ನು ರದ್ದುಗೊಳಿಸಿದೆ. ಸರ್ಕಾರದ ಆದೇಶದಂತೆ ರ್ಯಾಲಿಗೆ ನೀಡಿದ್ದ ಅನುಮತಿಯನ್ನು ಹಿಂಪಡೆಯುತ್ತಿರುವುದಾಗಿ ಬಿಬಿಎಂಪಿ ಅಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ರವಾನಿಸಿದೆ.
ನಗರದಲ್ಲಿ ಇತ್ತಿಚೆಗೆ ಓಮಿಕ್ರಾನ್ ಹಾಗೂ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಳವಾಗುತ್ತಿರುವುದರಿಂದ ಸೋಂಕು ತಡೆಗೆ ಅಗತ್ಯ ಕ್ರಮ ಕೈಗೊಳ್ಳುವ ಅವಶ್ಯಕತೆ ಇದೆ ಹೀಗಾಗಿ ಜನರ ಆರೋಗ್ಯ ದೃಷ್ಟಿಯಿಂದ ನಿಮಗೆ ನೀಡಲಾಗಿದ್ದ ಅನುಮತಿಯನ್ನು ರದ್ದುಗೊಳಿಸಲಾಗಿದೆ ಎಂದು ಬಿಬಿಎಂಪಿ ಯೋಜನಾ ವಿಭಾಗದ ಕಾರ್ಯಪಾಲಕ ಅಭಿಯಂತರರು ಪತ್ರ ಬರೆದಿದ್ದಾರೆ.

Articles You Might Like

Share This Article