Homeರಾಷ್ಟ್ರೀಯಕಡಲೆಕಾಯಿ ಗಂಟಲಲ್ಲಿ ಸಿಲುಕಿ 3 ವರ್ಷದ ಬಾಲಕ ಸಾವು

ಕಡಲೆಕಾಯಿ ಗಂಟಲಲ್ಲಿ ಸಿಲುಕಿ 3 ವರ್ಷದ ಬಾಲಕ ಸಾವು

3-year-old boy dies after peanut stuck in throat

ಮಲಪ್ಪುರಂ, ಜು. 15-ತಿಂಡಿಯಲ್ಲಿದ್ದ ಕಡಲೆಕಾಯಿ ಗಂಟಲಲ್ಲಿ ಸಿಲುಕಿದ ಪರಿಣಾಮ ಮೂರು ವರ್ಷದ ಬಾಲಕ ಮೃತಪಟ್ಟಿರುವ ದುರ್ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ಕುನ್ನುಂಪುರಂನಲ್ಲಿ ನಡೆದಿದೆ.

ಬಾಲಕ ಮನೆಯಲ್ಲಿ ಮಿಕ್ಸ್ಚರ್‌ ತಿನ್ನುತ್ತಿದ್ದ ವೇಳೆ ಅದರಲ್ಲಿದ್ದ ಕಡಲೆಕಾಯಿ ಆಕಸಿಕವಾಗಿ ಗಂಟಲಲ್ಲಿ ಸಿಲುಕಿದೆ ಎಂದು ವೆಂಗರಾ ಪೊಲೀಸ್‌‍ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಕಡಲೆಕಾಯಿ ಗಂಟಲಲ್ಲಿ ಸಿಲುಕಿದ ಪರಿಣಾಮ ಬಾಲಕ ಉಸಿರುಗಟ್ಟಿ ತೀವ್ರ ಅಸ್ವಸ್ಥಗೊಂಡಿದ್ದಾನೆ.

ತಕ್ಷಣವೇ ಕುಟುಂಬಸ್ಥರು ಬಾಲಕನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES

Latest News